ನವದೆಹಲಿ: ಮಹಾರಾಷ್ಟ್ರ ಚುನಾವಣಾ ಸಂದರ್ಭದಲ್ಲಿ ಅಮಿತ್ ಶಾ ಹಾಗೂ ರಾಹುಲ್ ಗಾಂಧಿ ಮಾಡಿದ ಕಾಮೆಂಟ್ಗಳಿಗೆ ವಿವರಣೆ ನೀಡುವಂತೆ ಚುನಾವಣಾ ಆಯೋಗ (Election Commission) ಕೋರಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ (JP Nadda) ಹಾಗೂ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಈ ಕುರಿತು ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗ ಪ್ರಶ್ನೆ ಮಾಡಿದೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿಲಅಮಿತ್ ಶಾ ಮತ್ತು ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆಗಳು ನೀತಿ ಸಂಹಿತಿಯನ್ನು ಉಲ್ಲಂಘಿಸಿದ ಆರೋಪ ಕೇಳಿ ಬಂದಿದೆ. ನವೆಂಬರ್ 20ರಂದು ಮಹಾರಾಷ್ಟ್ರ ಮತ್ತು ಜಾರ್ಖಂಡ್ (Jharkhand )(ಜಾರ್ಖಂಡ್ನಲ್ಲಿ 2ನೇ ಸುತ್ತಿನ ಮತದಾನ) ಚುನಾವಣೆಗೆ ಮುನ್ನವೇ ಸ್ಪಷ್ಟನೆ ನೀಡುವಂತೆ ಸೂಚಿಸಿದೆ.