ಎಲೆಕ್ಷನ್ ಎಫೆಕ್ಟ್ | ಭೂಮಾಪಕ ಆಯ್ಕೆ ಅಧಿಸೂಚನೆ ವಾಪಸ್! Landlord saaksha tv
ಬೆಂಗಳೂರು : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ 3 ಸಾವಿರ ಪರವಾನಗಿ ಭೂಮಾಪಕ ಆಯ್ಕೆ ಅಧಿಸೂಚನೆ ವಾಪಾಸ್ ಪಡೆಯಲಾಗಿದೆ.
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಪರವಾನಗಿ ಭೂಮಾಪಕ 3000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಆದ್ರೆ ರಾಜ್ಯದಲ್ಲಿ ಡಿಸೆಂಬರ್ 10ರಂದು 25 ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.
ಇದರ ಫಲಿತಾಂಶವು ಡಿಸೆಂಬರ್ 14ರಂದು ಪ್ರಕಟಗೊಳ್ಳಲಿದೆ.
ಹೀಗಾಗಿ ರಾಜ್ಯದಲ್ಲಿ ಡಿಸೆಂಬರ್ 16ರ ತನಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆದ್ದರಿಂದ ನೇಮಕಾತಿ ಆದೇಶ ವಾಪಸ್ ಪಡೆಯಲಾಗಿದೆ.
ಈ ಕುರಿತು ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.









