ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Election 2023) ಯ ಫಲಿತಾಂಶ ನಾಳೆಗೆ ಹೊರ ಬೀಳಲಿದ್ದು, ಈಗಾಗಲೇ ಬೆಟ್ಟಿಂಗ್ ದಂಧೆ ಆರಂಭವಾಗಿದೆ. ವ್ಯಕ್ತಿಯೊಬ್ಬರು ಬೆಟ್ಟಿಂಗ್ ಗೆ ಜಮೀನನ್ನೇ ಮಾರಾಟ ಮಾಡಲು ಮುಂದಾಗಿರುವ ಪ್ರಸಂಗವೊಂದು ನಡೆದಿದೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ (Yogesh Gowda Betting) ಜಮೀನು ಮಾರಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ (Congress) ಪಕ್ಷದ ಮುಖಂಡ, ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಕೆ.ವೆಂಕಟೇಶ್ (K Venkatesh) ಹಾಗೂ ಜೆಡಿಎಸ್ (JDS) ಅಭ್ಯರ್ಥಿ ಕೆ.ಮಹದೇವ್ ( K Mahadev) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿದೆ.
ಹೀಗಾಗಿ ಪಿರಿಯಾಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆಂದು 1 ಎಕರೆ 37 ಗುಂಟೆ ಜಮೀನು ಬೆಟ್ಟಿಂಗ್ ನಡೆದಿದೆ. ಸದ್ಯ ಯೋಗೇಶ್ ಗೌಡ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ
ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...








