ಬೆಂಗಳೂರು: ಚುನಾವಣಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಸಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಕನಕಪುರ ತಾಲೂಕು ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರ್ ಅರೆಸ್ಟ್ ಆಗಿದ್ದಾರೆ.
ಆರೋಪಿ ಪೂರ್ಣಿಮಾ (50) ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಲ್ಲದೇ, ಅಮಾನತುಗೊಳಿಸಲಾಗಿದೆ. ಟಿಡಿಸಿ ಕಾರ್ಯಕರ್ತ ಟಿಎನ್ ಸುರೇಶ್ (54) 8 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಚುನಾವಣಾ ಶಾಖೆಯ ಕೊಠಡಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ, ಸುರೇಶ್ ಅವರ ಪತ್ನಿ ಆರ್ ರೇಖಾ (43) ಅವರು ಪೂರ್ಣಿಮಾ ವಿರುದ್ಧ ದೂರು ದಾಖಲಿಸಿದ್ದಾರೆ. ಪೂರ್ಣಿಮಾ ಅವರು ನೀಡಿದ ಮಾನಸಿಕ ಕಿರುಕುಳದಿಂದ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಪತಿಯನ್ನು ಕೆಲಸದಿಂದ ವಜಾಗೊಳಿಸುವ ಬೆದರಿಕೆಯ ನೋಟಿಸ್ನ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದರು. ಸುರೇಶ್ ಕೂಡ ಸಾವಿಗೆ ಶಿರಸ್ತೇದಾರ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದ್ದು, ಸದ್ಯ ಅಧಿಕಾರಿಯನ್ನು ಅರೆಸ್ಟ್ ಮಾಡಲಾಗಿದೆ.