Election result : ನಾಳೆ ಗುಜರಾತ್, ಹಿಮಾಚಲ ಪ್ರದೇಶದ ಮತ ಎಣಿಕೆ – 8 ಗಂಟೆಗೆ ಆರಂಭ..
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ.
ಇದರ ಜೊತೆಗೆ ಮಣಿಪುರ ಲೋಕಸಭಾ ಕ್ಷೇತ್ರ ಮತ್ತು ಐದು ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯವು ನಡೆಯಲಿದೆ.
ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಮತ ಎಣಿಕೆಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, 37 ಎಣಿಕಾ ಕೇಂದ್ರಗಳನ್ನು ತೆರೆಯಲಾಗಿದೆ.
ಈ ಬಾರಿ ವಿದ್ಯುನ್ಮಾನ ಮತ ಯಂತ್ರ ಮತ್ತು ಅಂಚೆ ಮತಪತ್ರಗಳನ್ನು ಏಕಕಾಲಕ್ಕೆ ಎಣಿಕೆ ಮಾಡಲಾಗುವುದು ಎಂದು ಗುಜರಾತ್ ಮುಖ್ಯ ಚುನಾವಣಾಧಿಕಾರಿ ಪಿ. ಭಾರತಿ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ 68 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. Election result: Gujarat, Himachal Pradesh vote counting tomorrow – 8 am start..