Election results 2022 | ಕುಸಿದು ಕಣ್ಮರೆಯಾಗುತ್ತಿದೆ ಕಾಂಗ್ರೆಸ್…!!
ಇಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬರೋಬ್ಬರಿ 130 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಅತ್ಯಂತ ಹೀನಾಯ ಪ್ರದರ್ಶನ ತೋರುತ್ತಿದೆ.
ಉತ್ತರಪ್ರದೇಶ, ಪಂಜಾಬ್, ಗೋವಾ, ಮಣಿಪುರ, ಉತ್ತರಾಖಂಡ್ ರಾಜ್ಯಗಳ ಪೈಕಿ ಕೇವಲ ಗೋವಾದಲ್ಲಿ ಕಾಂಗ್ರೆಸ್ ಪೈಪೋಟಿ ನೀಡುತ್ತಿದೆ.
ಇನ್ನುಳಿದಂತೆ ಉತ್ತರ ಪ್ರದೇಶದಲ್ಲಿ ಕೇವಲ 4 ಸ್ಥಾನಗಳಲ್ಲಿ ಮುನ್ನಡೆಯಲಿದೆ. ಪಂಜಾಬ್ ನಲ್ಲಿ ಆಡಳಿತ ರೂಢವಾಗಿದ್ದ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
ಕೇವಲ 13 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಮಣಿಪುರದಲ್ಲಿ 14, ಉತ್ತರಾಖಂಡ್ ನಲ್ಲಿ 24 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಮುಖ್ಯವಾಗಿ ಇಷ್ಟು ಪಂಜಾಬ್ ನಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸುತ್ತಾ ಅಧಿಕಾರ ಹಿಡಿದಿತ್ತು.
ಆದ್ರೆ ಈಗ ತನ್ನದೇ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ. ಪಂಜಾಬ್ ಮಂದಿ ಆಮ್ ಆದ್ಮಿಯನ್ನು ಅಪ್ಪಿಕೊಂಡಿದ್ದಾರೆ.
ಇತ್ತ ಉತ್ತರಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸಿತ್ತು.
ಆದ್ರೆ ಯೋಗಿ ನಾಡಲ್ಲಿ ಜ್ಯೂನಿಯರ್ ಇಂದಿರಾ ಗಾಂಧಿ ಮ್ಯಾಜಿಕ್ ಮಾಡುವಲ್ಲಿ ವಿಫಲರಾಗಿದ್ದಾರೆ. 403 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಕೇವಲ 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸದ್ಯ ಗೋವಾದಲ್ಲಿ ಮಾತ್ರ ಕಾಂಗ್ರೆಸ್, ಬಿಜೆಪಿ ಪೈಪೋಟಿ ನೀಡುತ್ತಿದೆ.
election-results-2022-congress