ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಚುನಾವಣಾ ಫಲಿತಾಂಶಗಳು ರಾಜಕೀಯ ವಲಯದಲ್ಲಿ ದೊಡ್ಡ ಕುತೂಹಲಕ್ಕೆ ಕಾರಣವಾಗಿವೆ. ಮಹಾರಾಷ್ಟ್ರದಲ್ಲಿ ಮಹಾಯುತಿ (ಭಾಜಪ-ಶಿವಸೇನೆ) ಮತ್ತು ಮಹಾ ವಿಕಾಸ್ ಅಘಾಡಿ (ಕಾಂಗ್ರೆಸ್-ಎನ್‌ಸಿಪಿ-ಶಿವಸೇನೆ (ಉಭಯ)) ಮೈತ್ರಿಗಳ ನಡುವೆ ಕಠಿಣ ಪೈಪೋಟಿ ಇದೆ. ಈ ಫಲಿತಾಂಶಗಳು ರಾಜ್ಯದ ಭವಿಷ್ಯದ ರಾಜಕೀಯ ಸಮೀಕರಣಗಳನ್ನು ನಿರ್ಧರಿಸಬಹುದಾಗಿದೆ.
ವಿವಿಧ ರಾಜ್ಯಗಳ ವಿಧಾನಸಭಾ ಉಪಚುನಾವಣೆಗಳು ಮತ್ತು 2 ಲೋಕಸಭಾ ಉಪಚುನಾವಣೆಗಳ ಫಲಿತಾಂಶವೂ ಕೂಡ ಗಮನಾರ್ಹವಾಗಿದೆ. ವಿಶೇಷವಾಗಿ, ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸುತ್ತಿರುವುದರಿಂದ, ಈ ಕ್ಷೇತ್ರದ ಫಲಿತಾಂಶ ರಾಷ್ಟ್ರೀಯ ರಾಜಕೀಯದಲ್ಲಿ ಪ್ರಭಾವ ಬೀರುತ್ತದೆ ಎಂಬ ನಿರೀಕ್ಷೆಯಿದೆ.
ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಪ್ರಾರಂಭಿಕ ಪ್ರಕ್ರಿಯೆಯಿಂದಲೇ ರಾಜಕೀಯ ತೀಕ್ಷ್ಣತೆ ಕೂಡ ಹೆಚ್ಚುತ್ತಿದೆ,ಮತದಾರ ಪ್ರಭು ಯಾರ ಕೈ ಹಿಡಿಯಲ್ಲಿದ್ದಾರೆ ಕಾದು ನೋಡೋಣ








