ಯಾದಗಿರಿ : ಪ್ರಚಾರಕ್ಕೆ ತೆರಳಿದ್ದ ವಿಧಾನ ಪರಿಷತ್ ಮಾಜಿ ಸಭಾಪತಿ ಕಾರಿನ ಮೇಲೆ ಕಲ್ಲುಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.
ಬಿಜೆಪಿ ಕಾರ್ಯಕರ್ತ (BJP Activists) ರಿಂದ ದಾಳಿಯಾಗಿರುವ ಆರೋಪ ಕೇಳಿ ಬಂದಿದ್ದು, ಯಾದಗಿರಿ ಜಿಲ್ಲೆಯ ಸುರಪುರದಲ್ಲಿ ಈ ಘಟನೆ ನಡೆದಿದೆ. ವಿಧಾನ ಪರಿಷತ್ ಮಾಜಿ ಸಭಾಪತಿ ಡೆವಿಡ್ ಸಿಮನ್ (David Simeon) ವಾಹನ ಮೇಲೆ ದಾಳಿಯೇ ದಾಳಿ ನಡೆಸಲಾಗಿದದು, ಕಾರಿನ ಗಾಜು ಪುಡಿ ಪುಡಿಯಾಗಿದೆ. ಸುರಪುರದ ಡೊಣ್ಣಿಗೇರೆ ಬಡಾವಣೆಯಲ್ಲಿ ಸುರಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ (Congress Candidate) ರಾಜಾ ವೆಂಕಟಪ್ಪ ನಾಯಕ ಪರ ಡೆವಿಡ್ ಸಿಮನ್ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿಯೇ ಈ ಘಟನೆ ನಡೆದಿದ್ದು, ಏಕಾಏಕಿ ಎಂಟತ್ತು ಜನರು ದಾಳಿ ನಡೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಸುರಪುರ ಪೊಲೀಸ್ ಠಾಣೆ (Surapura Police Station) ಯಲ್ಲಿ ಪ್ರಕರಣ ದಾಖಲಾಗಿದೆ.








