ಬೆಂಗಳೂರು: ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ.
ಹೀಗಾಗಿ ಚುನಾವಣಾ ಆಯೋಗ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಎಲ್ಲ 6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡುತ್ತಿದ್ದು, ಬಿಜೆಪಿ 4 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೂ ಮತದಾನ ನಡೆಯಲಿದೆ.
ಪದವೀಧರ ಕ್ಷೇತ್ರದಲ್ಲಿ ಒಟ್ಟು 3,63,573 ಮತದಾರರಿದ್ದಾರೆ. 461 ಒಟ್ಟು ಮತ ಕೇಂದ್ರಗಳಿವೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 70260 ಮತಗಳಿದ್ದು, 170 ಮತ ಕೇಂದ್ರಗಳಿವೆ. ಒಟ್ಟಾರೆ 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿದ್ದಾರೆ. 1,56,623 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಡಾ. ಚಂದ್ರಶೇಖರ ಪಾಟೀಲ್ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಸ್ಪರ್ಧೆ ಮಾಡಿದ್ದಾರೆ. ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‍ನಿಂದ ಆಯನೂರು ಮಂಜುನಾಥ್ ಹಾಗೂ ಬಿಜೆಪಿಯಿಂದ ಧನಂಜಯ ಸರ್ಜಿ ಕಣದಲ್ಲಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ ಹಾಗೂ ಬಿಜೆಪಿಯಿಂದ ಅ. ದೇವೇಗೌಡ ಕಣದಲ್ಲಿದ್ದಾರೆ. ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಡಿ.ಟಿ. ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈ.ಎ. ನಾರಾಯಣಸ್ವಾಮಿ ಕಣದಲ್ಲಿದ್ದಾರೆ. ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಕೆ.ಕೆ. ಮಂಜುನಾಥ್, ಜೆಡಿಎಸ್‍ನಿಂದ ಭೋಜೇಗೌಡ ಕಣದಲ್ಲಿದ್ದಾರೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಮರಿತಿಬ್ಬೇಗೌಡ, ಜೆಡಿಎಸ್‍ನಿಂದ ವಿವೇಕಾನಂದ ಕಣದಲ್ಲಿದ್ದಾರೆ.