ನವದೆಹಲಿ: 18ನೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲ ರಾಜ್ಯಗಳಲ್ಲಿ ತಯಾರಿ ಭರ್ಜರಿಯಾಗಿ ನಡೆದಿದೆ.
ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.26 ಹಾಗೂ ಎರಡನೇ ಮತದಾನ ಮೇ 7 ರಂದು ನಡೆಯಲಿದೆ.
ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಆಂಧ್ರ ಪ್ರದೇಶ, ಚಂಡೀಗಢ, ದಾದ್ರಾ & ನಗರ್ ಹಾವೇಲಿ, ದೆಹಲಿ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಹರಿಯಾಣ, ಕೇರಳ, ಲಕ್ಷದ್ವೀಪ, ಲಡಖ್, ಮಿಜೋರಾಂ, ಮೇಘಾಲಯ, ನಾಗಾಲ್ಯಾಂಡ್, ಪುದುಚೇರಿ, ಸಿಕ್ಕಿಂ, ತಮಿಳುನಾಡು, ಪಂಜಾಬ್, ತೆಲಂಗಾಣ, ಉತ್ತರಾಖಂಡ ರಾಜ್ಯದಲ್ಲಿ ನಡೆಯಲಿವೆ.
2ನೇ ಹಂತದಲ್ಲಿ ಕರ್ನಾಟಕ, ಅಸ್ಸಾಂ, ಬಿಹಾರ್, ಛತ್ತೀಸಗಢ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತ್ರಿಪುರ, ಮಣಿಪುರ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ ರಾಜ್ಯಗಳಿಗೆ ನಡೆಯಲಿದೆ.
3ನೇ ಹಂತದಲ್ಲಿ ಕರ್ನಾಟಕ, ಅಸ್ಸಾಂ, ಬಿಹಾರ್, ಛತ್ತೀಸಗಢ, ಗೋವಾ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ. ದಾದ್ರಾ ಮತ್ತು ನಗರ್ ಹಾವೇಲಿಯಲ್ಲಿ ನಡೆಯಲಿವೆ.
4ನೇ ಹಂತದಲ್ಲಿ ಆಂಧ್ರಪ್ರದೇಶ, ಬಿಹಾರ್, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ ರಾಜ್ಯಗಳಲ್ಲಿ ನಡೆಯಲಿವೆ.
5ನೇ ಹಂತದಲ್ಲಿ ಬಿಹಾರ್, ಜಾರ್ಖಂಡ್, ಮಹಾರಾಷ್ಟ್ರ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ರಾಜ್ಯಗಳಲ್ಲಿ ನಡೆಯಲಿವೆ.
6ನೇ ಹಂತದಲ್ಲಿ ಬಿಹಾರ್, ಹರಿಯಾಣ, ಜಾರ್ಖಂಡ್, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ದೆಹಲಿ ರಾಜ್ಯಗಳಿಗೆ ಚುನಾವಣೆ ಜರುಗಲಿದೆ.
7ನೇ ಹಂತದಲ್ಲಿ ಬಿಹಾರ್, ಹಿಮಾಚಲ ಪ್ರದೇಶ, ಜಾರ್ಖಂಡ್, ಒಡಿಶಾ, ಪಂಜಾಬ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಮತದಾನ ನಡೆಯಲಿದೆ.