ಕಾವಲಿಗೆ ಹಾಕಿದ್ದ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಆನೆ ಬಲಿ
ಚಾಮರಾಜನಗರ : ಬೆಳೆ ಕಾವಲಿಗೆ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆಹಾರ ಅರಸಿ ಬಂದಿದ್ದ ಆನೆಯೊಂದು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಆಂಡಿಪಾಳ್ಯ ಗ್ರಾಮದಲ್ಲಿ ನಡೆದಿದೆ.
ಭಾಗ್ಯಮ್ಮ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಇದಕ್ಕೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿಯನ್ನು ಹಾಕಲಾಗಿತ್ತು.
ಆದ್ರೆ ಮೆಕ್ಕೆಜೋಳ ತಿನ್ನಲು ಬಂದ ಆನೆಗೆ ವಿದ್ಯುತ್ ತಂತ್ರಿ ಸ್ಪರ್ಶಿಸಿದ್ದು, ಸ್ಥಳದಲ್ಲಿ ಮೃತಪಟ್ಟಿದೆ.
ಬಿಳಿಗಿರಿರಂಗನ ಬೆಟ್ಟ ದೇವಾಲಯದ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಭಾಗ್ಯಮ್ಮ ತಲೆ ಮರೆಸಿಕೊಂಡಿದ್ದಾರೆ.
ಅಂದಹಾಗೆ ಕಾಡಂಚಿನ ಭಾಗದಲ್ಲಿರುವ ಕಾರಣ ಇಲ್ಲಿನ ಜಮೀನುಗಳಲ್ಲಿ ವಿದ್ಯುತ್ ತಂತಿ ಅಳವಡಿಸುವುದು ಸಾಮಾನ್ಯ ಎಂದು ಹೇಳಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel