ಬೆಳಗಾವಿ: ಇತ್ತೀಚೆಗೆ ವಿದ್ಯುತ್ ಅವಘಡಗಳು ಹೆಚ್ಚಾಗುತ್ತಿದ್ದು, ಬೆಂಗಳೂರಿನಲ್ಲಿ ಇತ್ತೀಚೆಗೆ ಎರಡು ಪ್ರತ್ಯೇಕ ಪ್ರಕರಣಗಳು ಕಂಡು ಬಂದಿದ್ದು, ವಿದ್ಯುತ್ ತಂತಿ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಅಥಣಿ (Athani) ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಂದೆ ಹಾಗೂ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಂದೆ ಮಲ್ಲಿಕಾರ್ಜುನ ಪೂಜಾರಿ(32), ಮಗ ಪ್ರೀತಮ್(7) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ.
ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಮೋಟಾರ್ ಆನ್ ಮಾಡಿ ವಾಟರ್ವಾಲ್ ಟರ್ನ್ ಮಾಡುವಾಗ ಮಲ್ಲಿಕಾರ್ಜುನ್ ಅವರಿಗೆ ವಿದ್ಯುತ್ ತಗುಲಿದೆ. ಮಗ, ತಂದೆಯನ್ನು ರಕ್ಷಿಸಲು ಹೋಗಿ ಕೈ ಹಿಡಿದಿದ್ದಾನೆ. ಆದರೆ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.