ರಾಜ್ಯದ ಜನರಿಗೆ ವಿದ್ಯುತ್ ಶಾಕ್ – ಪ್ರತಿ ಯುನಿಟ್ ಗೆ 35 ಪೈಸೆ ಹೆಚ್ಚಳ
ಕಳೆದ ಕೆಲವು ತಿಂಗಳಿಂದ ವಿದ್ಯುತ್ ದರ ಪರಿಷ್ಕರಣೆ ವಿಚಾರ ಚರ್ಚೆಯಲ್ಲಿತ್ತು. ಇದಕ್ಕೆ ಸಂಬಂಧಿಸಿ ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಎದುರಾಗಲಿದೆ. ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ಕೆಇಆರ್ಸಿ ಘೋಷಣೆ ಮಾಡಿದೆ.
ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗದಿಂದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಿ ದರ ಪರಿಷ್ಕರಣೆ ಮಾಡಲಾಗಿದೆ. ಏಪ್ರಿಲ್ 1ರಿಂದಲೇ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ ವರ್ಷ 30 ಪೈಸೆ ಹೆಚ್ಚಳ ಮಾಡಲಾಗಿತ್ತು. ಈ ಬಾರಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ.
ಬೆಸ್ಕಾಂ, ಚೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಸೇರಿದಂತೆ ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ ಮಾಡಲಾಗಿದೆ. ಬೇಸಿಗೆ ಆರಂಭಗ ಹೊತ್ತಿನಲ್ಲಿಯೇ ವಿದ್ಯುತ್ ದರ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಕೆಇಆರ್ ಸಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಗ್ಗೆ ಕೊರೋನಾ ಕಾರಣದಿಂದ ಅನುಮತಿ ನೀಡಿರಲಿಲ್ಲ. ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಬಗ್ಗೆ ಗ್ರೀನ್ ಸಿಗ್ನಲ್ ನೀಡಿದೆ.