ರಥೋತ್ಸವದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ 13 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತೇಕೂರ್ ಎಂಬಲ್ಲಿ ನಡೆದಿದೆ. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ರಥೋತ್ಸವ ನಡೆದಿತ್ತು. ಈ ಸಂದರ್ಭದಲ್ಲಿ ರಥವು ಹೈವೋಲ್ಟೇಜ್ ವಿದ್ಯುತ್ ತಂತಿಗೆ ತಗುಲಿದೆ. ಈ ವೇಳೆ ಕನಿಷ್ಠ 13 ಜನ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಈ ಕುರಿತು ಸ್ಥಳೀಯ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.