ಚಿಕ್ಕಮಗಳೂರು : ನಡು ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲೆ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ 11 ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇದರಿಂದ ಜನರು ಭಯಭೀತಗೊಂಡಿದ್ದಾರೆ.
ಧರ್ಮಸ್ಥಳ ಮತ್ತು ಮಂಗಳೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಕಾಡಾಣೆ ಕಾಣಿಸಿಕೊಂಡಿದೆ. ಇದನ್ನ ಪ್ರವಾಸಿಗರು ಮೊಬೈಲ್ ನಲ್ಲಿ ಸೆರೆ ಹಿಡಿದು ಹರಿ ಬಿಟ್ಟಿದ್ದಾರೆ.
ಇತ್ತ ಕಾಡಾನೆ ಪ್ರತ್ಯಕ್ಷದಿಂದಾಗಿ ಪ್ರವಾಸಿಗರೂ ಸೇರಿದಂತೆ ಸ್ಥಳೀಯರು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.









