kodagu ಕೊಡಗಿನಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ
ಮಡಿಕೇರಿ : ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಗೋಣಿಮರೂರು ಗ್ರಾಮದ ಪ್ರಾಥಮಿಕ ಶಾಲೆಯ ಕಾಂಪೌಂಡ್ ಮೇಲೆ ಕಾಡಾನೆಗಳ ಹಿಂಡು ದಾಳಿ ನಡೆಸಿದೆ.
ಕಾಡಾನೆ ದಾಳಿಯಿಂದಾಗಿ ಶಾಲೆಯ ಕಾಂಪೌಂಡ್ ಮತ್ತು ಗೇಟ್ ಗಳು ಮುರಿದು ಬಿದ್ದಿವೆ. ಶಾಲೆಯ ಸ್ವಾಗತ ಕಮಾನು ಮತ್ತು ಕಾಂಪೌಂಡ್ ಧ್ವಂಸವಾಗಿದೆ. ಆನೆಗಳ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಮಕ್ಕಳನ್ನ ಶಾಲೆಗೆ ಕಳುಹಿಸಿಕೊಡಲು ಹಿಂದೇಟು ಹಾಕುತ್ತಿದ್ದಾರೆ.
ಸಂಜೆಯಾಗುತ್ತಲೇ ಕಾಡಿನಿಂದ ನಾಡಿಗೆ ಬರುವ ಕಾಡಾನೆಗಳು, ಗ್ರಾಮದಲ್ಲಿ ಓಡಾಡುತ್ತವೆ. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಕೂಡಲೇ ಕಾಡಾನೆಗಳಿಂದ ಮುಕ್ತಿ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.