ಹಾಸನ: ಕಾಡಾನೆಗಳ ಹಿಂಡೊಂದು ಗ್ರಾಮದೊಳಗೆ ನುಗ್ಗಿ ದಾಂಧಲೆ ಮಾಡಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ಇಂದು ಏಕಾಏಕಿ ಮರಿಯಾನೆಯೊಂದಿಗೆ ಗ್ರಾಮದೊಳಗೆ ನುಗ್ಗಿದ ಕಾಡಾನೆಗಳ ಹಿಂಡು, ರೈತರು ಬೆಳೆದಿದ್ದ ಲಕ್ಷಾಂತರ ರೂ. ಬೆಲೆಬಾಳುವ ಶುಂಠಿ, ಕಾಫಿ ತೋಟ ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿವೆ.
ಕಾಡಾನೆ ಹಿಂಡು ಗ್ರಾಮದೊಳಕ್ಕೆ ಪ್ರವೇಶಿಸುತ್ತಿದ್ದಂತೆ ಗ್ರಾಮಸ್ಥರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹೀಗಾಗಿ ಕಾಗನೂರು, ಮಲಗಳಲೆ, ಅನಗಳಲೆ, ಕಟ್ಟೆಹೊಳೆ, ಹೊಂಕರವಳ್ಳಿ ಭಾಗದ ಗ್ರಾಮಸ್ಥರು ಭಯದಲ್ಲೇ ಕಾಲ ಕಳೆಯುವಂತಾಗಿದೆ.
ಜತೆಗೆ ಕಾಡಾನೆಗಳ ಹಿಂಡಿನ ಪ್ರವೇಶದಿಂದಾಗಿ ಕಾಫಿ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ತೋಟಗಳಿಗೆ ಹೋಗಲು ಹಿಂದೆ-ಮುಂದೆ ನೋಡುವಂತಾಗಿದೆ.
ಕಾಡಾನೆಗಳ ಹಾವಳಿಯಿಂದ ಯಾವುದೇ ಬೆಳೆ ಬೆಳೆಯಲು ಕಷ್ಟವಾಗುತ್ತಿದೆ. ಗುಂಪು ಗುಂಪಾಗಿ ಆನೆಗಳು ದಾಳಿ ಮಾಡುವುದರಿಂದ ಅವುಗಳು ತಿರುಗಾಡುವ ಹಾದಿಯಲ್ಲಿ ಸಿಗುವ ಎಲ್ಲಾ ಬೆಳೆಗಳನ್ನು ಸಂಪೂರ್ಣ ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟೇ ಸಾಹಸ ಮಾಡಿದರೂ ಆನೆಗಳ ಓಡಾಟದ ಸಮಸ್ಯೆ ದಿನದಿಂದ ಬಿಗಡಾಯಿಸುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ: ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಏನಿದೆ..?
ಬೆಂಗಳೂರು ಮೂಲದ ಟೆಕ್ಕಿ ಅತುಲ್ ಸುಭಾಷ್ ಅವರ ಆತ್ಮಹತ್ಯೆ ಪ್ರಕರಣವು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶವನ್ನು ನಿರ್ಧರಿಸುವಾಗ ಪರಿಗಣಿಸಬೇಕಾದ...