ಹಾಸನ: ಕಾಡಾನೆಗಳ ಹಿಂಡೊಂದು ಗ್ರಾಮದೊಳಗೆ ನುಗ್ಗಿ ದಾಂಧಲೆ ಮಾಡಿದ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ಇಂದು ಏಕಾಏಕಿ ಮರಿಯಾನೆಯೊಂದಿಗೆ ಗ್ರಾಮದೊಳಗೆ ನುಗ್ಗಿದ ಕಾಡಾನೆಗಳ ಹಿಂಡು, ರೈತರು ಬೆಳೆದಿದ್ದ ಲಕ್ಷಾಂತರ ರೂ. ಬೆಲೆಬಾಳುವ ಶುಂಠಿ, ಕಾಫಿ ತೋಟ ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿವೆ.
ಕಾಡಾನೆ ಹಿಂಡು ಗ್ರಾಮದೊಳಕ್ಕೆ ಪ್ರವೇಶಿಸುತ್ತಿದ್ದಂತೆ ಗ್ರಾಮಸ್ಥರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಹೀಗಾಗಿ ಕಾಗನೂರು, ಮಲಗಳಲೆ, ಅನಗಳಲೆ, ಕಟ್ಟೆಹೊಳೆ, ಹೊಂಕರವಳ್ಳಿ ಭಾಗದ ಗ್ರಾಮಸ್ಥರು ಭಯದಲ್ಲೇ ಕಾಲ ಕಳೆಯುವಂತಾಗಿದೆ.
ಜತೆಗೆ ಕಾಡಾನೆಗಳ ಹಿಂಡಿನ ಪ್ರವೇಶದಿಂದಾಗಿ ಕಾಫಿ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು ತೋಟಗಳಿಗೆ ಹೋಗಲು ಹಿಂದೆ-ಮುಂದೆ ನೋಡುವಂತಾಗಿದೆ.
ಕಾಡಾನೆಗಳ ಹಾವಳಿಯಿಂದ ಯಾವುದೇ ಬೆಳೆ ಬೆಳೆಯಲು ಕಷ್ಟವಾಗುತ್ತಿದೆ. ಗುಂಪು ಗುಂಪಾಗಿ ಆನೆಗಳು ದಾಳಿ ಮಾಡುವುದರಿಂದ ಅವುಗಳು ತಿರುಗಾಡುವ ಹಾದಿಯಲ್ಲಿ ಸಿಗುವ ಎಲ್ಲಾ ಬೆಳೆಗಳನ್ನು ಸಂಪೂರ್ಣ ನಾಶ ಮಾಡುತ್ತಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟೇ ಸಾಹಸ ಮಾಡಿದರೂ ಆನೆಗಳ ಓಡಾಟದ ಸಮಸ್ಯೆ ದಿನದಿಂದ ಬಿಗಡಾಯಿಸುತ್ತಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








