ಭೋಪಾಲ್: ಹುಲಿಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ (Madhya Pradesh) ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Bandhavgarh Tiger Reserve) ಏಳು ಆನೆಗಳು ಸಾವನ್ನಪ್ಪಿವೆ. ಮೂರು ಆನೆಗಳು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿವೆ ಎಂದು ವನ್ಯಜೀವಿ ಅಧಿಕಾರಿಗಳು ಹೇಳಿದ್ದಾರೆ.
ಏಳು ಆನೆಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ರೈತರು ತಮ್ಮ ಬೆಳೆಗಳಿಗೆ ಕೀಟನಾಶಕ ಸಿಂಪಡಿಸಿದ್ದು, ಅದನ್ನು ತಿಂದ ಪರಿಣಾಮ ಆನೆಗಳು ಸಾವನ್ನಪ್ಪಿವೆ ಎಂದು ಕೂಡ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಆನೆಗಳ ಸಾವಿಗೆ ಸಂಬಂಧಪಟ್ಟಂತೆ ದೆಹಲಿ ಮೂಲದ ವನ್ಯಜೀವಿ ಅಪರಾಧ ನಿಯಂತ್ರಣ ದಳ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದು, ಅದರ ಜೊತೆಗೆ ರಾಜ್ಯ ಸರ್ಕಾರ ಕೂಡಾ ತನಿಖೆಗೆ ಸೂಚಿಸಿದೆ.