ಮಲೆನಾಡು ಭಾಗದಲ್ಲಿ ಮುಂದುವರಿದ ಕಾಡಾನೆಗಳ ಉಪಟಳ Saaksha Tv
ಹಾಸನ: ಕೊರೊನ ನಿಯಂತ್ರಣಕ್ಕೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದ್ದು ಜನರು ಸಂಕಷ್ಟದಲ್ಲಿದ್ದಾರೆ. ಆದರೆ ಈಗ ಗಾಯದ ಮೇಲೆ ಬರೆ ಎಳೆದಂತೆ ಜಿಲ್ಲೆಯ ಆಲೂರು ತಾಲ್ಲೂಕಿನ ರಂಗನಾಥಸ್ವಾಮಿ ಬೆಟ್ಟ ಮತ್ತು ಅಡಿಬೈಲು ಗ್ರಾಮದ ರೈತರ ಹೊಲಗಳಲ್ಲಿ ಕಾಡಾನೆಗಳು ಉಪಟಳ ನೀಡುತ್ತಿವೆ.
ಇಪ್ಪತ್ತಕ್ಕೂ ಹೆಚ್ಚು ಆನೆಗಳು ದಾಳಿ ಮಾಡಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಇದರಿಂದ ರೈತ ಕಂಗಾಲಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಗಜಪಡೆಯನ್ನು ಅರಣ್ಯಕ್ಕೆ ಅಟ್ಟಲು ಹರಸಾಹಸ ಪಡುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯದ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.