18 ವರ್ಷ ಮೇಲ್ಪಟ್ಟವರು ತಪ್ಪದೆ ಬೂಸ್ಟರ್ ಡೋಸ್ ಪಡೆಯಿರಿ – ಸುಧಾಕರ್
ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿಶ್ಚಯಿಸಿದೆ. 18 ವರ್ಷ ಮೇಲ್ಪಟ್ಟು 2 ಡೋಸ್ ಪಡೆದವರು ಮುನ್ನೆಚ್ಚರಿಕೆ ಡೋಸ್ ಗಳನ್ನ ಖಾಸಗಿ ಕೇಂದ್ರದಲ್ಲಿ ಪಡೆಯಬಹುದು ಎಂದು ಆರೋಗ್ಯ ಇಲಾಖೆ ತಿಳಸಿದೆ.
ಕೊರೊನಾ ವಿರುದ್ಧದ ನಮ್ಮ ಹೋರಾಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟ ನಾಗರೀಕರಿಗೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ಅನುಮತಿ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ ಭಾನುವಾರದಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಸಚಿವ ಸುಧಾಕರ್ ಟ್ವಿಟ್ ಮಾಡಿದ್ದಾರೆ.
ಕೊರೊನಾ ವಿರುದ್ಧದ ನಮ್ಮ ಹೋರಾಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 10 ರಿಂದ 18 ವರ್ಷ ಮೇಲ್ಪಟ್ಟ ನಾಗರೀಕರಿಗೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ಅನುಮತಿ ನೀಡಲಾಗಿದೆ.
18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ ಭಾನುವಾರದಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು.
— Dr Sudhakar K (@DrSudhakar_) April 8, 2022
ಇಲ್ಲಿಯವರೆಗೂ ಆರೋಗ್ಯ ಕಾರ್ಯಕರ್ತರು, ಕೋವಿಡ್ ವಾರಿಯರ್ಸ್ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಜನರಿಗೆ ಮುನ್ನೆಚ್ಚರಿಕೆ ಡೋಸ್ ಗಳನ್ನ ನೀಡಲಾಗುತ್ತಿತ್ತು.
ಬೂಸ್ಟರ್ ಡೋಸ್ ಮೊದಲ ಮತ್ತು ಎರಡನೇ ಡೋಸ್‌ನಂತೆಯೇ ಇರುತ್ತದೆ ಎಂದು ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಕೋವಾಕ್ಸಿನ್ ಪಡೆದವರಿಗೆ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಪಡೆದವರಿಗೆ ಕೋವಿಶೀಲ್ಡ್ ಸಿಗುತ್ತದೆ.
ಇಲ್ಲಿಯವರೆಗೆ, ದೇಶದ ಎಲ್ಲಾ 15 ವರ್ಷ ಮೇಲ್ಪಟ್ಟ ಸುಮಾರು 96% ಜನರು ಕನಿಷ್ಠ ಒಂದು ಕೋವಿಡ್ -19 ಲಸಿಕೆ ಡೋಸ್ ಅನ್ನು ಪಡೆದಿದ್ದಾರೆ ಮತ್ತು 15 ವರ್ಷ ಮೇಲ್ಪಟ್ಟ ಸುಮಾರು 83% ಜನರು ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ.
ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ 2.4 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.








