SIddaramaiah ಅವರೇ ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟ
ಬೆಂಗಳೂರು : ಸಿದ್ದರಾಮಯ್ಯ ಅವರೇ ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.
ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಹುಯಿಲೆಬ್ಬಿಸುವ ಕಾಂಗ್ರೆಸ್ಸಿಗರಿಗೆ ಘೋಷಿತ ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯ ಮರೆತು ಹೋಗಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿರುವ ಬಿಜೆಪಿ, ಮಜಾವಾದಿ ಸಿದ್ದರಾಮಯ್ಯ ಅವರೇ, ನೀವು √ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದೀರಾ ಎಂದು ಪ್ರಶ್ನಿಸಿದೆ.
ತುರ್ತುಪರಿಸ್ಥಿತಿಯ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ನಿರ್ಧಾರದ ಬಗ್ಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಅಭಿಪ್ರಾಯವೇನು?#Emergency1975HauntsIndia
— BJP Karnataka (@BJP4Karnataka) June 25, 2022
ಅಲ್ಲದೆ √ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದೇ ಪರಿಗಣಿಸಲ್ಪಟ್ಟ ತುರ್ತುಪರಿಸ್ಥಿತಿ ವಿರೋಧಿ ಹೋರಾಟದಲ್ಲಾದರೂ ಭಾಗಿಯಾಗಿದ್ದಿರಾ? ಇಲ್ಲ, ಇಲ್ಲ, ಇಲ್ಲ. ನಿಮ್ಮದೇನಿದ್ದರೂ ಅಧಿಕಾರದ ಪಾಯಸ ಉಣ್ಣಲು ಹೋರಾಟವಷ್ಟೇ.
ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಕಳವಳ ವ್ಯಕ್ತಪಡಿಸುವ #ಬುರುಡೆರಾಮಯ್ಯ ಅವರೇ, ಘೋಷಿತ ತುರ್ತುಸ್ಥಿತಿಯ ಕರಾಳ ದಿನಗಳ ಬಗ್ಗೆ ಕನ್ನಡಿಗರಿಗೆ ವಿಶೇಷ ಉಪನ್ಯಾಸ ನೀಡಲು ಆಹ್ವಾನಿಸುತ್ತಿದ್ದೇವೆ, ಒಪ್ಪಿಕೊಳ್ಳುವಿರಾ? ಜಲದರ್ಶಿನಿ ವೀರನ ಬಡಾಯಿ ಪರೀಕ್ಷೆಗೆ ಇದೊಂದು ವೇದಿಕೆಯಾಗಲಿ.
ತುರ್ತುಪರಿಸ್ಥಿತಿಯ ಮೂಲಕ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ನಿರ್ಧಾರದ ಬಗ್ಗೆ ಡಿಕೆಶಿ ಮತ್ತು ಸಿದ್ದರಾಮಯ್ಯ ಅಭಿಪ್ರಾಯವೇನು ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಪ್ರಶ್ನೆ ಮಾಡಿದೆ.








