ಹುಬ್ಬಳ್ಳಿ: ಅನೇಕ ಭಾವನಾತ್ಮಕ ವಿಚಾರಗಳ ಜತೆಗೆ ಹಿಂದೆ ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿದ್ದ ಸಾವಿರಾರು ಕೋಟಿ ರೂಪಾಯಿ ಯೋಜನೆಗಳನ್ನು ರದ್ದುಗೊಳಿಸುವ ಹುನ್ನಾರವನ್ನು ಬಿಜೆಪಿ ಸರ್ಕಾರ ನಡೆಸುತ್ತಿದೆ. ಬಿಜೆಪಿ ವಿರುದ್ಧ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಹುಬ್ಬಳ್ಳಿಯಲ್ಲಿ ನಡೆದ ಬೆಳಗಾವಿ ವಿಭಾಗಮಟ್ಟದ ಕಾಂಗ್ರೆಸ್ ಸಂಕಲ್ಪ ಸಮಾವೇಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಮಹಾತ್ಮ ಗಾಂಧೀಜಿ ಹೆಸರಿನ ವಾರ್ಡನ್ನು ಬಿಜೆಪಿ ಸರ್ಕಾರ ಅಟಲ್ ನಗರ ಎಂದು ಬದಲಿಸಲು ಮುಂದಾಗಿದೆ. ಇಂತಹ ಅನೇಕ ಭಾವನಾತ್ಮಕ ವಿಚಾರಗಳ ಜತೆಗೆ ನಮ್ಮ ಸರ್ಕಾರದ ಮಂಜೂರು ಮಾಡಿದ್ದ ಸಾವಿರಾರು ಕೋಟಿ ರುಪಾಯಿ ಯೋಜನೆಗಳನ್ನು ರದ್ದುಗೊಳಿಸುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದರು.

ಪ್ರತಿ ಕ್ಷೇತ್ರದಲ್ಲೂ ಅನೇಕ ಅನ್ಯಾಯಗಳಾಗಿವೆ. ಅದರ ಅನ್ವಯ ಹೋರಾಟ ಮಾಡಲು ಸಿದ್ಧತೆ ಮಾಡಿಕೊಳ್ಳಲಿದ್ದೇವೆ. ಪಕ್ಷ ಸಂಘಟನೆ ಮತ್ತಷ್ಟು ಬಲವಾಗಿ ನಡೆಯಲಿದೆ. ಈ ವರ್ಷ ಹೋರಾಟ ಹಾಗೂ ಸಂಘಟನೆ ವರ್ಷ ಎಂದು ಘೋಷಿಸಿದ್ದೇವೆ. ಈ ಹೋರಾಟ ನನ್ನ ಹೋರಾಟ ಅಲ್ಲ. ಎಐಸಿಸಿಯಿಂದಾಗಲಿ, ಕೆಪಿಸಿಸಿಯಿಂದಾಗಲಿ ಸೂಚಿಸುವ ಹೋರಾಟ ಅಲ್ಲ. ಸ್ಥಳೀಯರ ಸಮಸ್ಯೆ, ಅಭಿಪ್ರಾಯವನ್ನು ಮನಗಂಡು, ಅವರ ಭಾವನೆಗಳ ಆಧಾರದ ಮೇಲೆ ಹೋರಾಟ ರೂಪಿಸುತ್ತೇವೆ ಎಂದರು.
ಕಾಂಗ್ರೆಸ್ ಕಚೇರಿಗಳಲ್ಲೇ ಬ್ಲಾಕ್ ಕಾಂಗ್ರೆಸ್ ಸಭೆ
ಹಲವು ಶಾಸಕರು ತಮ್ಮ ಮನೆಯಲ್ಲೇ ಬ್ಲಾಕ್ ಕಾಂಗ್ರೆಸ್ ಸಭೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಯಾವ ಶಾಸಕರ ಮನೆಯಲ್ಲೂ ಬ್ಲಾಕ್ ಕಾಂಗ್ರೆಸ್ ಸಭೆ ನಡೆಸಬಾರದು. ಕಾಂಗ್ರೆಸ್ ಕಚೇರಿಗಳಲ್ಲೇ ನಡೆಸಬೇಕು ಎಂದು
ಕಾಂಗ್ರೆಸ್ ಶಾಸಕರಿಗೆ ಕಟ್ಟಪ್ಪಣೆ ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ ನ ಬ್ಲಾಕ್ ಹಾಗೂ ಇತರ ಅಧ್ಯಕ್ಷರುಗಳು ಪಕ್ಷದ ಅಧ್ಯಕ್ಷರ ರಾಯಭಾರಿಗಳು. ಇವರು ಜನರ ಮಧ್ಯೆ ಇದ್ದು, ಅವರ ಅಭಿಪ್ರಾಯವನ್ನು ನಮಗೆ ತಿಳಿಸಬೇಕು. ಜನಸಾಮಾನ್ಯರ ಧ್ವನಿ ಬ್ಲಾಕ್ ಅಧ್ಯಕ್ಷರ ಧ್ವನಿಯಾಗಬೇಕು. ಈ ಬ್ಲಾಕ್ ಅಧ್ಯಕ್ಷರ ಧ್ವನಿ ಕೆಪಿಸಿಸಿ ಅಧ್ಯಕ್ಷರ ಧ್ವನಿಯಾಗಬೇಕು.ಕಾಂಗ್ರೆಸ್ ನಾಯಕರ ಧ್ವನಿಯಾಗಬೇಕು. ಈ ಹಿನ್ನೆಲೆಯಲ್ಲಿ ಮಹಿಳಾ, ರೈತ ಹಾಗೂ ಇತರೆ ಘಟಕಗಳ ಪ್ರಮುಖರು, ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದರು.

ಆದ್ಯತೆ ಮೇರೆಗೆ ರಾಜ್ಯ ಪ್ರವಾಸ
ಕಲಬುರ್ಗಿ ಸಮಾವೇಶದ ನಂತರ ಒಂದು ದಿನಾಂಕ ನಿಗದಿ ಮಾಡಿ ರಾಜ್ಯದಲ್ಲಿ ಪಕ್ಷ ಸೋತಿರುವ ವಿಧಾನಸಭಾ ಕ್ಷೇತ್ರಗಳಿಗೆ ಆದ್ಯತೆ ಮೇರೆಗೆ ರಾಜ್ಯ ಪ್ರವಾಸ ಮಾಡುತ್ತೇವೆ. ವಿರೋಧ ಪಕ್ಷದ ನಾಯಕರು ಎಲ್ಲ ಭಾಗಕ್ಕೂ ಬರಲು ಸಾಧ್ಯವಾಗುವುದಿಲ್ಲ. ಕೆಲವು ಭಾಗಗಳಲ್ಲಿ ಅವರು ನಮ್ಮ ಜತೆ ಇರುತ್ತಾರೆ. ಉಳಿದೆಡೆ ಇತರೆ ರಾಜ್ಯ ನಾಯಕರ ಜತೆ ಹೋರಾಟ ಮಾಡುತ್ತೇವೆ.
ಈ ಮಧ್ಯದಲ್ಲಿ ಯಾರು ಅರ್ಹ ನಾಯಕರಿದ್ದಾರೆ, ಯಾರು ಪಕ್ಷ ಸಂಘಟನೆ ಮಾಡುತ್ತಾರೆ ಎಂಬುದನ್ನು ಗಮನಿಸುತ್ತೇವೆ. ಚುನಾವಣೆ ಬಂದಾಗ ಟಿಕೆಟ್ ಕೇಳುವುದಲ್ಲ. ಈಗಿನಿಂದಲೇ ರಸ್ತೆಗಿಳಿದು, ಸಂಘಟನೆ ಮಾಡಿ ವ್ಯವಸಾಯ ಮಾಡಬೇಕು. ಈ ಹಿನ್ನೆಲೆಯಲ್ಲಿ ನಾನು ಎಲ್ಲೋ ಕೂತು ತೀರ್ಮಾನ ಮಾಡುವ ಬದಲು ನನ್ನ ಕಣ್ಣಾರೆ ನೋಡಿ ತೀರ್ಮಾನ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಅದಕ್ಕಾಗಿ ಕಾರ್ಯಕರ್ತರ ಬಳಿಗೆ ಧಾವಿಸಲಿದ್ದೇನೆ ಎಂದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕೇಂದ್ರ ಹಾಗೂ ರಾಜ್ಯದ ಜನವಿರೋಧಿ ಬಿಜೆಪಿ ಸರಕಾರಗಳ ವಿರುದ್ಧ ಹೋರಾಟ ರೂಪಿಸುವ ಸಂಬಂಧ ಸಲಹೆ ನೀಡಿದ್ದಾರೆ. ಅದನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








