ಚಾಮರಾಜನಗರ : ಮಹದೇಶ್ವರ ಬೆಟ್ಟ ಸಿಬ್ಬಂದಿಗಳಿಗೆ ಕೊರೋನಾ ದೃಢಪಟ್ಟಿದೆ. ಈ ಹಿನ್ನೆಲೆ ಆಡಳಿತ ಕಚೇರಿ, ದಾಸೋಹ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಇಂದು ನಾಳೆ ಮಲೆಮಹದೇಶ್ವರ ಬೆಟ್ಟದ ದಾಸೋಹ ಭವನದಲ್ಲಿ ಅನ್ನದಾನವನ್ನು ರದ್ದುಗೊಳಿಸಲಾಗಿದೆ.
ಇತ್ತ ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆ ಪ್ರಾಧಿಕಾರದ ಆಡಳಿತ ಕಚೇರಿಯನ್ನೂ ಸೀಲ್ ಡೌನ್ ಮಾಡಲಾಗಿದ್ದು, ಸ್ಯಾನಿಟೈಸ್ ಸಿಂಪಡಿಸಲಾಗಿದೆ. ಬೆಳಗ್ಗೆ 7 ರಿಂದ ಸಂಜೆ 7 ಗಂಟೆ ತನಕ ಮಾತ್ರ ದೇವರ ದರ್ಶನಕ್ಕೆ ಅವಕಾಶ ಮಾಡಿಇಕೊಡಲಾಗಿದೆ. ಇದರ ಹೊರತಾಗಿ, ಅನ್ನದಾಸೋಹ ಸೇರಿದಂತೆ ವಿಶೇಷ ಸೇವೆಗಳಿಗೂ ಬ್ರೇಕ್ ಹಾಕಲಾಗಿದೆ.









