ಪ್ರಸ್ತುತದಲ್ಲಿ ಎಲ್ಲಾ ಕಡೆಯಲ್ಲಿ ಖಾಸಗೀಕರಣವಾಗಿದೆ. ಹೀಗಾಗಿ ಖಾಸಗಿವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ಇದನ್ನ ಬೆಂಬಲಿಸಿ ಕರ್ನಾಟಕ ಬಂದ್‍ಗೆ ನಾವು ಬೆಂಬಲ ನೀಡಿದ್ದೇವೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಸರ್ಕಾರ ಡಾ.ಸರೋಜಿನಿ ಮಹಿಷಿ ವರದಿಯನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸರ್ಕಾರ ಬಂದ್ ಮಾಡುವವರ ಕರೆದು ಅವರ ಬೇಡಿಕೆಯನ್ನ ಈಡೇರಿಸಬೇಕು. ಖಾಸಗಿ ಕಂಪೆನಿಯವರೊಂದಿಗೂ ಚರ್ಚೆ ನಡೆಸಿ, ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಅನುವು ಮಾಡಿಕೊಡಬೇಕು. ಆದರೆ, ಬಿಜೆಪಿ ಸರ್ಕಾರ ಪ್ರತಿಭಟನಾಕಾರರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವ ಯಾವಕ್ರಮಕ್ಕೂ ಮುಂದಾಗದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ರು.








