ಉಗ್ರರ ವಿರುದ್ಧ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ – Saaksha Tv
ಜಮ್ಮು ಕಾಶ್ಮೀರ : ಉಗ್ರರ ವಿರುದ್ಧ ಜಮ್ಮು- ಕಾಶ್ಮೀರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.
ಜಮ್ಮು-ಕಾಶ್ಮೀರದ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಚಾರ್ಸೂ ಪ್ರದೇಶದಲ್ಲಿ ಬೆಳಗ್ಗೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ಜಮ್ಮು-ಕಾಶ್ಮೀರದ ಪೊಲೀಸ್ನ ವಿಶೇಷ ವಕ್ತಾರರು ಟ್ವೀಟ್ ಮಾಡಿದ್ದಾರೆ.
#Encounter has started at Charsoo area of #Awantipora. Police and security forces are on the job. Further details shall follow. @JmuKmrPolice
— Kashmir Zone Police (@KashmirPolice) March 15, 2022
ಶ್ರೀನಗರ-ಜಮ್ಮು ಹೆದ್ದಾರಿಯ ಉದ್ದಕ್ಕೂ ಇರುವ ಗ್ರಾಮದಲ್ಲಿ ಉಗ್ರಗಾಮಿಗಳಿರುವ ಬಗ್ಗೆ ಸುಳಿವು ಸಿಕ್ಕ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದಿವೆ. ಈ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಸದ್ಯಕ್ಕೆ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.