ಕಾಶ್ಮೀರದಲ್ಲಿ ಲಷ್ಕರ್ ಕಮಾಂಡರ್ ಸೇರಿ ಮೂವರು ಉಗ್ರರು ಮಟಾಶ್..!
ಜಮ್ಮು- ಕಾಶ್ಮೀರ: ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆಸಲಾದ ಎನ್ ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಭಾರತ ದೇಶದೊಳಗೆ ನುಗ್ಗಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಲಷ್ಕರ್-ಇ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಮೂವರು ಉಗ್ರರನ್ನು ಭಾರತೀಯ ಸೇನಾ ಪಡೆ ಸದೆಬಡಿದಿದೆ. ಜಮ್ಮು -ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಮೂವರು ಉಗ್ರರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮಾ ಪಟ್ಟಣದಲ್ಲಿ ಅಡಗಿದ್ದ ಉಗ್ರರನ್ನು ಶರಣಾಗುವಂತೆ ಭದ್ರತಾ ಪಡೆಗಳು ಸೂಚನೆ ನೀಡಿದ್ದರೂ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಎಚ್ಚೆತ್ತ ರಕ್ಷಣಾ ಪಡೆಗಳು ಪ್ರತಿ ದಾಳಿ ನಡೆಸಿ ನಡೆದ ಎನ್‍ಕೌಂಟರ್‍ನಲ್ಲಿ ಮೂವರು ಹತರಾಗಿದ್ದಾರೆ. ಹತನಾಗಿರುವ ಒಬ್ಬ ಉಗ್ರನ ವಿವರವನ್ನು ಪತ್ತೆ ಹಚ್ಚಲಾಗಿದ್ದು , ಆತ ಎಲ್‍ಇಟಿ ಸಂಘಟನೆಯ ಕಮಾಂಡರ್ ಅಜಾಫ್ ಅಲಿಯಾಸ್ ಅನೂಪ್ ಹುರೀನಾ ಎಂದು ತಿಳಿದು ಬಂದಿದ್ದು , ಈತ ಪಾಕಿಸ್ತಾನ ಪ್ರಜೆ ಎಂದು ತಿಳಿದು ಬಂದಿದೆ.
ಬೆಸ್ಕಾಮ್ – 400 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಬುಧವಾರ ಮುಂಜಾನೆಯಿಂದಲೂ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಗುಂಡಿನಚಕಮಕಿ ನಡೆಯುತ್ತಿತ್ತು. ಅಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಸ್ಥಳವನ್ನು ಸುತ್ತುವರಿದಿದ್ದರು. ತಮ್ಮನ್ನು ಸೆರೆ ಹಿಡಿಯಲು ಬಂದ ಪೊಲೀಸ್ ಸಿಬ್ಬಂದಿ ಮೇಲೆ ಭಯೋತ್ಪಾದಕರೂ ಗುಂಡಿನ ದಾಳಿ ನಡೆಸಿದ್ದರು.
ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರಸಂಘಟನೆಯ ಕಮಾಂಡರ್ ಐಜಾಜ್ ಅಲಿಯಾಸ್ ಅಬು ಹುರೈರಾ ಮತ್ತು ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಹತ್ಯೆಗೈದಿದ್ದಾಗಿ ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ. ಲಷ್ಕರ್ ಇ ತೊಯ್ಬಾ ಕಮಾಂಡರ್ ಸತ್ತಿದ್ದಕ್ಕೆ ನಿಜಕ್ಕೂ ರಕ್ಷಣಾ ಪಡೆಗಳಿಗೆ ಅಭಿನಂದನೆ ಸಲ್ಲಿಸಬೇಕು ಎಂದು ಕಾಶ್ಮೀರ ವಲಯದ ಐಜಿಪಿ ಟ್ವೀಟ್ ಮಾಡಿದ್ದಾರೆ.ಉಗ್ರರು ಅಡಗಿದ್ದಾರೆಂಬ ಮಾಹಿತಿ ಬಂದ ತಕ್ಷಣ ಅವರನ್ನು ಹುಡುಕಿ ಬಂಧಿಸಲು ನಾವು ಹೋಗಿದ್ದು. ಆದರೆ ಅಡಗಿದ್ದ ಉಗ್ರರು ಒಂದೇ ಸಮ ನಮ್ಮ ಮೇಲೆ ದಾಳಿ ಮಾಡಲು ಶುರು ಮಾಡಿದರು. ಅನಿವಾರ್ಯವಾಗಿ ನಾವೂ ಅದಕ್ಕೆ ಪ್ರತಿಕ್ರಿಯೆ ನೀಡಬೇಕಾಯಿತು. ಅದು ಎನ್ಕೌಂಟರ್ಗೆ ತಿರುಗಿತು ಎಂದು ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 11 ರಂದು ನೀಟ್ ಸ್ನಾತಕೋತ್ತರ ಪರೀಕ್ಷೆ