ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಬಲಿ : ಓರ್ವ ಪೊಲೀಸ್ ಅಧಿಕಾರಿ ಹುತಾತ್ಮ..!
ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಬಡ್ಗಾಮ್ ಜಿಲ್ಲೆಗಳಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ. ಈ ಘರ್ಷಣೆಯಲ್ಲಿ , ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಅಡಗಿ ಕುಳಿತಿದ್ದ ಲಷ್ಕರ್-ಇ-ತೊಯ್ಬಾ ಸಂಘಟನ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.
ಗಲ್ವಾನ್ ಘರ್ಷಣೆಯಲ್ಲಿ ಚೀನಾ ಸೈನಿಕರು ಸಾವು: ಮೊದಲ ಬಾರಿಗೆ ಅಧಿಕೃತವಾಗಿ ಅಂಗೀಕರಿಸಿದ ಚೀನಾ
ಉಗ್ರರು ಮೊದಲು ಗುಂಡು ಹಾರಿಸಿದ್ದರಿಂದ ಭದ್ರತಾ ಪಡೆಗಳೂ ಪ್ರತಿಯಾಗಿ ಗುಂಡು ಹಾರಿಸಿದವು. ಬಡ್ಗಾಮ್ ಜಿಲ್ಲೆಯ ಜನಿಗಾಂ ಗ್ರಾಮದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ತೀವ್ರವಾಗಿ ಗಾಯಗೊಂಡರು. ಈ ಪೈಕಿ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಅಧಿಕಾರಿಗಳು ಹೇಳಿದ್ದಾರೆ. ಹತ್ಯೆಯಾದ ಉಗ್ರರಿಂದ ಭದ್ರತಾಪಡೆಗಳು ಶಸ್ತ್ರಾಸ್ತ್ರಗಳು, ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.