ನವದೆಹಲಿ: ಆಪ್ ಸಂಸದ ಸಂಜಯ್ ಸಿಂಗ್ (Sanjay Singh)ರನ್ನು ಜಾರಿ ನಿರ್ದೇಶನಾಲಾಯದ ಅಧಿಕಾರಿಗಳು ಬಂಧಿಸಿದ್ದಾರೆ.
ಸಂಜಯ್ ಸಿಂಗ್ ನಿವಾಸದ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಮನೆಯಲ್ಲಿ ಶೋಧ ಕಾರ್ಯ ನಡೆಸಿ, ಶೋಧದ ನಂತರ ಅವರನ್ನು ಅರೆಸ್ಟ್ ಮಾಡಿದ್ದಾರೆ.
ಆಪ್ ಸಂಸದ ಸಂಜಯ್ ಸಿಂಗ್ ಅವರ ವಿರುದ್ಧ ಹೊಸ ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ವಿರುದ್ಧ ಆರೋಪ ಕೇಳಿ ಬಂದಿದ್ತು. ಈ ಹಿನ್ನೆಲೆಯಲ್ಲಿ ಅವರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅವರ ನಿವಾಸದಲ್ಲಿ 10 ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಅಲ್ಲದೇ, ಇತ್ತೀಚೆಗೆ, ಆಪ್ ಸಂಸದರಿಗೆ ನಿಕಟ ಸಂಬಂಧ ಹೊಂದಿರುವ ಹಲವರ ನಿವೇಶನಗಳ ಮೇಲೆ ಕೂಡ ದಾಳಿ ನಡೆಸಲಾಗಿತ್ತು.