ADVERTISEMENT
Thursday, August 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ENG v IND 1st ODI : ಬುಮ್ರಾ ಬೆಂಕಿ ದಾಳಿ : ಭಾರತಕ್ಕೆ 10 ವಿಕೆಟ್‌ ಜಯ

Mahesh M Dhandu by Mahesh M Dhandu
July 13, 2022
in Newsbeat, Sports, ಕ್ರೀಡೆ
rp-singh-india-weakness-they-have-change-mindset saaksha tv

rp-singh-india-weakness-they-have-change-mindset saaksha tv

Share on FacebookShare on TwitterShare on WhatsappShare on Telegram

ENG v IND 1st ODI : ಬುಮ್ರಾ ಬೆಂಕಿ ದಾಳಿ : ಭಾರತಕ್ಕೆ 10 ವಿಕೆಟ್‌ ಜಯ

ಬೂಮ್ ಬೂಮ್ ಬುಮ್ರಾ ಬೆಂಕಿ ಬೌಲಿಂಗ್ ದಾಳಿಯ ನೆರವನಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಅದರಂತೆ ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಇಂಗ್ಲೆಂಡ್ ತಂಡಕ್ಕೆ ಬುಮ್ರಾ ಆಘಾತ ನೀಡಿದರು.

ಟೀಂ ಇಂಡಿಯಾದ ಆಕ್ರಮಣಕಾರಿ ಬೌಲಿಂಗ್‌ ದಾಳಿಗೆ ತತ್ತರಿಸಿದ  ಆಂಗ್ಲರ ಪಡೆ, 25.2 ಓವರ್‌ಗಳಲ್ಲಿ ಕೇವಲ 110 ರನ್‌ಗಳಿಗೆ ಸರ್ವಪತನ ಕಂಡಿತು.

ಟಾರ್ಗೆಟ್‌ ಬೆನ್ನತ್ತಿದ ಭಾರತ 18.4 ಓವರ್‌ನಲ್ಲಿ ವಿಕೆಟ್‌ ನಷ್ಟವಿಲ್ಲದೆ 114 ರನ್‌ಗಳಿಸುವ ಮೂಲಕ 10 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.

ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಮೊದಲು ಬ್ಯಾಟಿಂಗ್‌ ಆರಂಭಿಸಿದ ಇಂಗ್ಲೆಂಡ್‌ ಗೆ ಭಾರತೀಯ ಬೌಲರ್ ಗಳು ದುಸ್ವಪ್ನವಾದರು.

ಟಾಪ್ ಆರ್ಡರ್ ನ ನಾಲ್ವರು ಬ್ಯಾಟರ್ ಗಳು ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರು.

ಪರಿಣಾಮ  25 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡ ಇಂಗ್ಲೆಂಡ್‌ ಸಂಕಷ್ಟಕ್ಕೆ ಸಿಲುಕಿತು.

eng-v-ind-1st-odi-team india beat england saaksha tv
eng-v-ind-1st-odi-team india beat england saaksha tv

ಈ ವೇಳೆ ನಾಯಕ ಜೋಸ್‌ ಬಟ್ಲರ್‌(30) ಹಾಗೂ ಮೂಯಿನ್‌ ಅಲಿ(14) ತಂಡಕ್ಕೆ ಸ್ವಲ್ಪಮಟ್ಟಿನ ಚೇತರಿಕೆ ನೀಡಿದರು.

ಉಳಿದಂತೆ ಇನ್ನಿಂಗ್ಸ್‌ ಕೊನೆಯಲ್ಲಿ ಡೇವಿಡ್‌ ವಿಲ್ಲಿ(21), ಓವರ್ಟನ್‌(8), ಬ್ರೈಡನ್‌ ಕಾರ್ಸ್‌(15) ಹಾಗೂ ಟಾಪ್ಲೆ(6) ಉಪಯುಕ್ತ ರನ್‌ಗಳಿಸಿದರು.

ಭಾರತದ ಪರ ಮಿಂಚಿನ ದಾಳಿ ನಡೆಸಿದ ಬುಮ್ರಾ 19 ರನ್ ನೀಡಿ ಆರು ವಿಕೆಟ್ ಪಡೆದರು.

ಶಮಿ ಮೂರು ವಿಕೆಟ್ ಪ್ರಸಿದ್ಧ್ ಕೃಷ್ಣ ಒಂದು ವಿಕೆಟ್ ಪಡೆದರು.  

ಅತಿಥೇಯರನ್ನ 110 ರನ್‌ಗಳ ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಭಾರತ, ಬ್ಯಾಟಿಂಗ್‌ನಲ್ಲೂ ಅಬ್ಬರಿಸಿತು.

ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮ 76* ರನ್‌(58 ಬಾಲ್‌, 6 ಬೌಂಡರಿ, 5 ಸಿಕ್ಸ್‌) ಮೂಲಕ ಬಿರುಸಿನ ಅರ್ಧಶತಕ ಸಿಡಿಸಿ ಮಿಂಚಿದರು.

ಇವರಿಗೆ ಸಾಥ್‌ ನೀಡಿದ ಶಿಖರ್‌ ಧವನ್‌(31*) ಉತ್ತಮ ಆಟವಾಡಿದರು.

ಇಂಗ್ಲೆಂಡ್‌ ಬೌಲಿಂಗ್‌ ದಾಳಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಈ ಜೋಡಿ, ಶತಕದ ಜೊತೆಯಾಟದ ಮೂಲಕ 114 ರನ್‌ಗಳಿಸಿ ತಂಡವನ್ನ ಗೆಲುವಿನ ದಡಸೇರಿಸಿದರು.

Tags: #Saaksha TVEnglandteam india
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram