ENG v IND 3rd ODI : ಪಂತ್ ಪವರ್ ಸೆಂಚೂರಿ.. ಭಾರತಕ್ಕೆ ಸರಣಿ
ಸ್ಪೈಡರ್ ಮ್ಯಾನ್ ರಿಷಬ್ ಪಂತ್ ಅವರ ಅಮೋಘ ಸಶತಕ ಹಾಗೂ ಹಾರ್ದಿಕ್ ಪಾಂಡ್ಯ ಅವರ ಜವಾಬ್ದಾರಿಯುವ ಆಟದ ನೆರವಿನಿಂದ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 2- 1 ರ ಅಂತರದೊಂದಿಗೆ ಗೆದ್ದುಕೊಂಡಿದೆ.
ಮ್ಯಾಂಚೆಸ್ಟರ್ ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಳ್ತು.
ನಾಯಕ ರೋಹಿತ್ ಶರ್ಮಾ ಅವರ ನಿರ್ಧಾರವನ್ನು ಸಮರ್ಥಿಸುವಂತೆ ಬೌಲಿಂಗ್ ದಾಳಿ ನಡೆಸಿದ ಸಿರಾಜ್ ಆರಂಭದಲ್ಲಿಯೇ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡಿದರು.
ಬಳಿಕ ಇಂಗ್ಲೆಂಡ್ ತಂಡ ಬ್ಯಾಕ್ ಟು ಬ್ಯಾಕ್ ವಿಕೆಟ್ ಗಳನ್ನು ಕಳೆದುಕೊಳ್ಳುತ್ತಾ ಸಾಗಿತ್ತು.
ಪರಿಣಾಮ ಇಂಗ್ಲೆಂಡ್ 45.5 ಓವರ್‌ಗಳಲ್ಲಿ 259 ರನ್‌ಗಳಿಗೆ ಆಲೌಟ್ ಆಯಿತು.
ಈ ಟಾರ್ಗೆಟ್ ಚೇಸ್ ಮಾಡಿದ ಭಾರತ 42.1 ಓವರ್‌ಗಳಲ್ಲಿ 261/5 ರನ್‌ಗಳಿಸುವ ಮೂಲಕ ಜಯದ ನಗೆಬೀರಿತು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಮತ್ತೆ ನಿರೀಕ್ಷಿತ ಆರಂಭ ಸಿಗಲಿಲ್ಲ.
ಇಂಗ್ಲೆಂಡ್ ಪರ ನಾಯಕ ಜೋಸ್ ಬಟ್ಲರ್(60) ಅರ್ಧಶತಕದ ಜೊತೆಗೆ ಜೇಸನ್ ರಾಯ್(41), ಮೊಯಿನ್ ಅಲಿ(34) ಹಾಗೂ ಕ್ರೇಗ್ ಓವರ್ಟನ್(32) ಜವಾಬ್ದಾರಿಯುತ ಆಟವಾಡಿದರು.
ಇವರನ್ನ ಬಿಟ್ಟರೇ ಇನ್ನುಳಿದವರು ಕ್ರೀಸ್ ನಲ್ಲಿ ಹೆಚ್ಚು ಕಾಲ ನಿಲ್ಲಲೇ ಇಲ್ಲ. ಪರಿಣಾಮ ಇಂಗ್ಲೆಂಡ್ 259 ರನ್‌ಗಳಿಗೆ ಆಲೌಟ್ ಆಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ ನಾಲ್ಕು, ಯುಜುವೇಂದ್ರ ಚಹಲ್ ಮೂರು, ಸಿರಾಜ್ ಎರಡು ವಿಕೆಟ್ ಪಡೆದು ಮಿಂಚಿದ್ರು.
ಇಂಗ್ಲೆಂಡ್ ನೀಡಿದ 260 ರನ್‌ಗಳ ಟಾರ್ಗೆಟ್ ಬೆನ್ನತ್ತಿದ ಭಾರತ ಕೂಡ ಬ್ಯಾಟಿಂಗ್ ವೈಫಲ್ಯಕ್ಕೆ ಸಿಲುಕಿತು.
ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮ(17), ಶಿಖರ್ ಧವನ್(1) ಬಹುಬೇಗನೆ ನಿರ್ಗಮಿಸಿದರೆ.
ಇವರ ಬೆನ್ನಲ್ಲೇ ವಿರಾಟ್ ಕೊಹ್ಲಿ(17) ಮತ್ತೊಮ್ಮೆ ನಿರಾಸೆ ಮೂಡಿಸಿದರು. ಈ ವೇಳೆ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್(16) ಕೂಡ ತಂಡಕ್ಕೆ ಆಸರೆಯಾಗಲಿಲ್ಲ.
ಪರಿಣಾಮ 72ಕ್ಕೆ 5 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಸೋಲಿನ ಸುಳಿಗೆ ಸಿಲುಕಿತ್ತು.
ಈ ಹಂತದಲ್ಲಿ ಜೊತೆಯಾದ ರಿಷಬ್ ಪಂತ್(125*) ಹಾಗೂ ಹಾರ್ದಿಕ್ ಪಾಂಡ್ಯ(71) ಭರ್ಜರಿ ಆಟವಾಡಿದರು.
5ನೇ ವಿಕೆಟ್‌ಗೆ ಜೊತೆಯಾದ ಈ ಇಬ್ಬರು ಇಂಗ್ಲೆಂಡ್ ಬೌಲಿಂಗ್ ದಾಳಿಗೆ ದಿಟ್ಟ ಪ್ರತ್ಯುತ್ತರ ನೀಡಿದರು.
5ನೇ ವಿಕೆಟ್‌ಗೆ 133 ರನ್‌ಗಳ ಅದ್ಭುತ ಜೊತೆಯಾಟವಾಡಿದ ಈ ಇಬ್ಬರು ಟೀಂ ಇಂಡಿಯಾದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.
ಅಂತಿಮ ಪಂದ್ಯದಲ್ಲಿ ಶತಕ ಸಿಡಿಸಿದ ರಿಷಬ್ ಪಂತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಹಾರ್ದಿಕ್ ಪಾಂಡ್ಯ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.