Eng-vs-Ind-1st-odi | ಬುಮ್ರಾ ಬೆಂಕಿ ದಾಳಿ : ಮೂವರು ಇಂಗ್ಲೆಂಡ್ ಬ್ಯಾಟರ್ ಗಳು ಡಕೌಟ್
ಓವಲ್ ಅಂಗಳದಲ್ಲಿ ಶಮಿ – ಬುಮ್ರಾ ಬೆಂಕಿ ದಾಳಿಗೆ ಇಂಗ್ಲೆಂಡ್ ತಂಡ ನಲುಗಿ ಹೋಗುತ್ತಿದೆ.
ಓವೆಲ್ ನಲ್ಲಿ ಆರಂಭವಾಗಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ರೋಹಿತ್ ಶರ್ಮಾ ನಿರ್ಣಯವನ್ನು ಸಮರ್ಥಿಸಿಕೊಳ್ಳುವಂತೆ ಇಂಡಿಯಾದ ಬೌಲರ್ ಗಳು ದಾಳಿ ನಡೆಸುತ್ತಿದ್ದಾರೆ.
ಬಲಿಷ್ಠ ಬ್ಯಾಟಿಂಗ್ ಲೈನ್ ಅಪ್ ಇರುವ ಇಂಗ್ಲೆಂಡ್ ತಂಡಕ್ಕೆ ಬುಮ್ರಾ ದುಸ್ವಪ್ನವಾಗಿದ್ದಾರೆ.
ಇಂಗ್ಲೆಂಡ್ ನ ಮೂವರು ಸ್ಟಾರ್ ಬ್ಯಾಟರ್ ಗಳು ಶೂನ್ಯಕ್ಕೆ ಔಟ್ ಆಗಿದ್ದಾರೆ.
ಜೇಸನ್ ರಾಯ್, ಜೋ ರೂಟ್, ಬೆನ್ ಸ್ಟೋಕ್ಸ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ರೆ, ಜಾನಿ ಬೈರ್ ಸ್ಟೋ ಏಳು ರನ್ ಗಳಿಸಿ ಔಟ್ ಆಗಿದ್ದಾರೆ.
ಭಾರತದ ಪರ ಬುಮ್ರಾ ಮೂರು ವಿಕೆಟ್ ಪಡೆದಿದ್ದರೇ, ಶಮಿ ಒಂದು ವಿಕೆಟ್ ಪಡೆದಿದ್ದಾರೆ.

ಇನ್ನು ನಿರೀಕ್ಷೆಯಂತೆ ಈ ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್ ಆಗಿದ್ದಾರೆ. ಅವರಿಗೆ ಇಂಜೂರಿಯಾಗಿದ್ದು ಮೊದಲ ಪಂದ್ಯದಿಂದ ದೂರ ಉಳಿಯಲಿದ್ದಾರೆ ಎಂಬ ವರದಿಗಳು ಬಂದಿದ್ದವು.
ಅದರಂತೆ ಇದೀಗ ವಿರಾಟ್ ಕೊಹ್ಲಿ ಮೊದಲ ಪಂದ್ಯವನ್ನು ಮಿಸ್ ಮಾಡಿಕೊಂಡಿದ್ದು, ಅವರ ಬದಲಿಗೆ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
ಭಾರತದ ಪ್ಲೇಯಿಂಗ್ ಇಲೆವೆನ್ ಹೀಗಿದೆ
ರೋಹಿತ್ ಶರ್ಮಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಶಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹ್ಮದ್ ಶಮಿ, ಜಸ್ ಪ್ರಿತ್ ಬುಮ್ರಾ, ಯಜುವೇಂದ್ರ ಚಹಾಲ್, ಪ್ರಸಿದ್ಧ ಕೃಷ್ಣ
ಇಂಗ್ಲೆಂಡ್ ತಂಡ
ಜೇಸನ್ ರಾಯ್, ಜಾನಿ ಬೈರ್ ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್ ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ