Eng-vs-Ind-2nd-odi | ಟಾಸ್ ಗೆದ್ದ ಟೀಂ ಇಂಡಿಯಾ.. ತಂಡಕ್ಕೆ ಬಂದ ವಿರಾಟ್
ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯ ಲಾರ್ಡ್ಸ್ ಅಂಗಳದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಇಂದಿನ ಪಂದ್ಯಕ್ಖಾಗಿ ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.
ಇಂಚೂರಿ ಸಮಸ್ಯೆಯಿಂದ ಮೊದಲ ಏಕದಿನ ಪಂದ್ಯದಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ, ಇಂದಿನ ಪಂದ್ಯದಲ್ಲಿ ಕಂ ಬ್ಯಾಕ್ ಮಾಡಿದ್ದಾರೆ. ಶ್ರೇಯಸ್ ಅಯ್ಯರ್ ಸ್ಥಾನ ಕಳೆದುಕೊಂಡಿದ್ದಾರೆ.

ಇನ್ನುಳಿದಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ಇತ್ತ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇಂದಿನ ಪಂದ್ಯದಲ್ಲಿ ಅಖಾಡಕ್ಕಿಳಿಯಲಿದೆ.
ತಂಡಗಳು
ಇಂಗ್ಲೆಂಡ್ (ಪ್ಲೇಯಿಂಗ್ XI): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(w/c), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಭಾರತ (ಆಡುವ XI): ರೋಹಿತ್ ಶರ್ಮಾ (ಸಿ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ಡಬ್ಲ್ಯೂ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ








