ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ
ಇಂಗ್ಲೆಂಡ್ ವಿರುದ್ದದ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ ಒಂದೊಂದು ಪಂದ್ಯ ಗೆದ್ದಿವೆ.
ಹೀಗಾಗಿ ಇಂದು ಗೆಲುವು ಸಾಧಿಸಿದ ತಂಡಕ್ಕೆ ಸರಣಿ ಗೆಲುವಿನ ಬಹುಮಾನ ಸಿಗಲಿದೆ.
ಅಂತಿಮ ಪಂದ್ಯಕ್ಕೆ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.
ಎರಡನೇ ಪಂದ್ಯದಲ್ಲಿ ಕಣಕ್ಕಿಳಿದ ಆಟಗಾರರನೇ ಇಂದು ಮಾಚೆಂಸ್ಟರ್ ನಲ್ಲಿ ಗುದ್ದಾಟ ನಡೆಸಲಿದೆ.

ತಂಡಗಳು ಹೀಗಿವೆ
ಭಾರತ (ಆಡುವ XI): ರೋಹಿತ್ ಶರ್ಮಾ (ಸಿ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ಡಬ್ಲ್ಯೂ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್ (ಪ್ಲೇಯಿಂಗ್ XI): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(w/c), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ