ENG Vs IND : ಇಂಗ್ಲೆಂಡ್ ಪ್ರವಾಸಕ್ಕೆ ಮಯಾಂಕ್.. ಪಂತ್ ವೈಸ್ ಕ್ಯಾಪ್ಟನ್..!!
ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಗಾಯದ ಸಮಸ್ಯೆಯಿಂದಾಗಿ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಹೀಗಾಗಿ ಅವರ ಜಾಗದಲ್ಲಿ ಮಯಾಂಕ್ ಅಗರ್ವಾಲ್ ಸ್ಥಾನ ಪಡೆಯಲಿದ್ದಾರೆ.
ವಿಕೆಟ್ ಕೀಪರ್ ರಿಷಬ್ ಪಂತ್ ಅವರನ್ನು ತಂಡದ ಉಪನಾಯಕರನ್ನಾಗಿ ನೇಮಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಿರ್ಣಾಯಕ ಟೆಸ್ಟ್ ಪಂದ್ಯ ಜುಲೈ 1 ರಿಂದ ಎಡ್ಜ್ ಬಾಸ್ಟನ್‌ನಲ್ಲಿ ನಡೆಯಲಿದೆ.

“ನಾವು ಇಂಗ್ಲೆಂಡ್ ಪ್ರವಾಸಕ್ಕೆ ಮಯಾಂಕ್ ರೆಡಿಯಾಗಿರುವಂತೆ ಹೇಳಿದ್ದೇವೆ.
ರಾಹುಲ್ ಪರ್ಯಾಯವಾಗಿ ಟೀಮ್ ಮ್ಯಾನೇಜ್‌ಮೆಂಟ್ ಬಳಿ ಕೇಳಿದ್ದೇವೆ.
ಈ ತಿಂಗಳ 19 ರೊಳಗೆ ನಮಗೆ ಸೂಚನೆ ನೀಡುವಂತೆ ತಿಳಿಸಿದ್ದೇವೆ.
ಅಗತ್ಯವಿದ್ದರೆ ಎರಡನೇ ಬ್ಯಾಚ್ ನೊಂದಿಗೆ ಮಯಾಂಕ್ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸಂದರ್ಶನದಲ್ಲಿ ತಿಳಿಸಿದ್ದಾರೆ.
ಅಲ್ಲದೇ ರಾಹುಲ್ ಬದಲಿಗೆ ಪಂತ್ ವೈಸ್ ಕ್ಯಾಪ್ಟನ್ ಆಗಿರಲಿದ್ದಾರೆ ಎಂದು ತಿಳಿದುಬಂದಿದೆ.








