ENG vs IND : ದೀಪರ್ ಹೂಡಾ ಸ್ಥಾನದಲ್ಲಿ ವಿರಾಟ್
ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಗೆಲುವಿನೊಂದಿಗೆ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ.
ಎಡ್ಜ್ ಬಾಸ್ಟನ್ ನಲ್ಲಿ ನಡೆಯಲಿರುವ ಎರಡನೇ ಟಿ 20 ಪಂದ್ಯಕ್ಕೆ ಮೊದಲ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ಆಟಗಾರರು ಲಭ್ಯವಿದ್ದಾರೆ.
ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಯಾರು ಯಾರು ಸ್ಥಾನ ಪಡೆಯಲಿದ್ದಾರೆ ಅನ್ನೋ ಕುತೂಹಲ ಎಲ್ಲರಲ್ಲೂ ಮೂಡಿದೆ.
ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಪಾರ್ಥಿವ್ ಪಾಟೀಲ್ ತಮ್ಮದೇಯಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಕ್ಷರ್ ಪಟೇಲ್ ಸ್ಥಾನದಲ್ಲಿ ರವೀಂದ್ರ ಜಡೇಜಾ ಅಂತಿಮ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಅದೇ ರೀತಿ ಅರ್ಷದೀಪ್ ಸಿಂಗ್ ಸ್ಥಾನದಲ್ಲಿ ಜಸ್ ಪ್ರೀತ್ ಬುಮ್ರಾ ಬರಲಿದ್ದಾರೆ.
ಇನ್ನು ವಿರಾಟ್ ಕೊಹ್ಲಿ, ದೀಪಕ್ ಹೂಡಾ ಸ್ಥಾನದಲ್ಲಿ ತಂಡಕ್ಕೆ ವಾಪಸ್ ಆಗಲಿದ್ದಾರೆ ಎಂದು ನಾನು ಭಾವಿಸುತ್ತೇನೆ.
ಮತ್ತೊಂದು ಕಡೆ ಶ್ರೇಯಸ್ ಅಯ್ಯರ್ ಪ್ಲೇಯಿಂಗ್ ಎಲೆವೆನ್ ನಲ್ಲಿ ಸ್ಥಾನ ಸಿಗಬಹುದು.
ದಿನೇಶ್ ಕಾರ್ತಿಕ್ ಸ್ಥಾನದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ಕಾಣಿಸಿಕೊಳ್ಳಬಹುದು ಎಂದು ಪಾರ್ಥಿವ್ ಹೇಳಿದ್ದಾರೆ.
ಭಾರತ ಸಂಭಾವ್ಯ ತಂಡ
ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಯಜುವೇಂದ್ರ ಚಹಾಲ್