ಚೆನ್ನೈ: ಖಿನ್ನತೆಯಿಂದ ಬಳಲುತ್ತಿದ್ದ ಸಾಫ್ಟವೇರ್ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೆಲಸದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. 38 ವರ್ಷದ ಸಾಪ್ಟವೇರ್ ಇಂಜಿನಿಯರ್ ಕಾರ್ತಿಕೇಯನ್ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ತನಗೆ ತಾನೇ ವಿದ್ಯುತ್ ಪ್ರವಹಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತನ ಪತ್ನಿ ಗುರುವಾರ ಲೈವ್ ವೈರ್ ಗೆ ಸಿಕ್ಕು ಬಿದ್ದಿರುವುದನ್ನು ಕಂಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.
ತಮಿಳುನಾಡಿನ ತೇಣಿ ಜಿಲ್ಲೆಯವರಾದ ಕಾರ್ತಿಕೇಯನ್, ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಚೆನ್ನೈನಲ್ಲಿ ವಾಸಿಸುತ್ತಿದ್ದರು. ಕಳೆದ 15 ವರ್ಷಗಳಿಂದ ಚೆನ್ನೈನ ಸಾಫ್ಟ್‌ವೇರ್ ಸಂಸ್ಥೆಯೊಂದರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಬೇರೆಯೊಂದು ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಈ ಮಧ್ಯೆ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದ. ಕೆಲಸದ ಒತ್ತಡದಿಂದಾಗಿ ಆತ ಖಿನ್ನತೆಗೆ ಒಳಗಾಗಿದ್ದ ಎಂದು ಕೂಡ ತಿಳಿದು ಬಂದಿದೆ.