ಕನ್ನಡದಲ್ಲಿ ಎಂಜಿನಿಯರಿಂಗ್ ಪದವಿ : ಎಐಸಿಟಿಇ
ನವದೆಹಲಿ : ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳ ವಿದ್ಯಾರ್ಥಿಗಳಿಗೆ ನೆರವಾಗುವಂತೆ 2020-21ರಿಂದ ಆರಂಭವಾಗುವ ಹೊಸ ಶೈಕ್ಷಣಿಕ ವರ್ಷದಿಂದ ಕನ್ನಡ ಸೇರಿದಂತೆ 8 ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಪದವಿಯನ್ನು ನೀಡಲು ಕಾಲೇಜುಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮತಿ ನೀಡಿದೆ.
ಎಐಸಿಟಿಇಯ ಹೊಸ ನೀತಿಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬಹುದು.
ಹಿಂದಿ, ಬಂಗಾಳಿ, ತೆಲುಗು, ತಮಿಳು, ಗುಜರಾತಿ, ಮರಾಠಿ ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಇನ್ಮುಂದೆ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಪಡೆಯಬಹುದು.
ಜರ್ಮನಿ, ಫ್ರಾನ್ಸ್, ರಷ್ಯಾ, ಜಪಾನ್ ಮತ್ತು ಚೀನಾದಂತಹ ಅನೇಕ ಮುಂದುವರಿದ ದೇಶಗಳು ತಮ್ಮ ದೇಶೀಯ ಭಾಷೆಗಳಲ್ಲಿ ಸಂಪೂರ್ಣ ಶಿಕ್ಷಣವನ್ನು ನೀಡುತ್ತಿವೆ. ಈಗ ಭಾರತದಲ್ಲೂ ದೇಸಿ ಭಾಷೆಗಳಲ್ಲಿ ಶಿಕ್ಷಣ ನೀಡಲು ನಿರ್ಧರಿಸಿದೆ.










