ತುಮಕೂರು: ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೇಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗೃಹ ಸಚಿವ ಪರಮೇಶ್ವರ್ (G Parameshwara) ಒಡೆತನದ ಸಿದ್ದಾರ್ಥ್ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ. 19 ವರ್ಷದ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ವಿದ್ಯಾರ್ಥಿನಿ ಬಿಇ ಐಎಸ್ ವಿಭಾಗದಲ್ಲಿ 3ನೇ ಸೆಮಿಸ್ಟರ್ ಓದುತ್ತಿದ್ದರು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಡಿವೈಎಸ್ಪಿ ಪಿ.ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.