ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವಿದ್ಯಾರ್ಥಿಗಳ ಸಾವು…
1 min read
ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದು ವಿದ್ಯಾರ್ಥಿಗಳ ಸಾವು…
ಉಡುಪಿ: ಸೈಂಟ್ ಮೇರಿಸ್ ದ್ವೀಪದಲ್ಲಿ ಸೆಲ್ಫಿ ತೆಗೆಯಲು ಕಲ್ಲುಗಳ ಮೇಲೆ ಹತ್ತಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಬೆಂಗಳೂರು ಮೂಲದ ಇಂಜಿನಿಯರಿಂಗ್ ಕಾಲೇಜಿನಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ತಂಡದಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ತೆಗೆಯಲು ಕಲ್ಲುಗಳ ಮೇಲೆ ಹತ್ತಿದ್ದರು. ಈ ಸಂದರ್ಭದಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಇಬ್ಬರೂ ವಿದ್ಯಾರ್ಥಿಗಳ ಹೆಸರು ಸತೀಶ್ ಎಂದು ತಿಳಿದು ಬಂದಿದೆ. ಇವರಲ್ಲಿ ಓರ್ವ ವಿದ್ಯಾರ್ಥಿಯ ಮೃತದೇಹ ಮೇಲಕ್ಕೆತ್ತಲಾಗಿದೆ. ಇನ್ನೋರ್ವನ ದೇಹಕ್ಕಾಗಿ ಶೋಧಕಾರ್ಯ ಮುಂದುವರೆದಿದೆ.
ಮಲ್ಪೆ ಪೊಲೀಸರು ಸೆಂಟ್ ಮೆರೀಸ್ ದ್ವೀಪಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಕೆಲದಿನಗಳ ಹಿಂದೆಯಷ್ಟೆ ಕೇರಳದ ಮೂವರು ವಿದ್ಯಾರ್ಥಿಗಳು ಇದೇ ದ್ವೀಪದಲ್ಲಿ ಮುಳುಗಿ ಸಾವನ್ನಪ್ಪಿದ್ದರು.
engineering students dies while taking a selfie at udupi saint mary’s island