ಭಾರತ ಹಾಗೂ ಇಂಗ್ಲೆಂಡ್ ಮಧ್ಯೆ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲಿ ಎರಡೂ ತಂಡಗಳು ಮೊದಲ ಇನ್ನಿಂಗ್ ಮುಗಿಸಿದ್ದು, ಆತಿಥೇಯ ತಂಡ ಮುನ್ನಡೆ ಕಾಯ್ದುಕೊಂಡಿದೆ.
5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು 253 ರನ್ಗಳಿಗೆ ಆಲೌಟ್ ಮಾಡುವಲ್ಲಿ ಭಾರತದ ಬೌಲರ್ ಗಳು ಯಶಸ್ವಿಯಾಗಿದ್ದಾರೆ. ಭಾರತ ತಂಡವು ತನ್ನ ಮೊದಲ ಇನ್ನಿಂಗ್ಸ್ ನ್ನು 396ಕ್ಕೆ ಅಂತ್ಯಗೊಳಿಸಿತ್ತು. ಈ ಮೂಲಕ 143 ರನ್ಗಳ ಮುನ್ನಡೆ ಕಾಯ್ದುಕೊಂಡಿದೆ.
ಇಂಗ್ಲೆಂಡ್ ಪರ ಆರಂಭಿಕ ಝಾಕ್ ಕ್ರೌಲಿ ಅತ್ಯಧಿಕ 76 ರನ್ಗಳ ಇನ್ನಿಂಗ್ಸ್ ಆಡಿದರೆ, ನಾಯಕ ಬೆನ್ ಸ್ಟೋಕ್ಸ್ 47 ರನ್ ಗಳಿಸಿದ್ದಾರೆ. ಭಾರತದ ಪರ ಜಸ್ಪ್ರೀತ್ ಬುಮ್ರಾ 6 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 3 ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ ದ್ವಿಶತಕ ಸಿಡಿಸಿ ಮಿಂಚಿದ್ದಾರೆ. ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿದೆ.