ಪಾಕ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ
ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಆದ್ರೆ ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಆಡಿದ್ದ ಆಟಗಾರರನ್ನೇ ಪಾಕ್ ವಿರುದ್ಧವೂ ಕಣಕ್ಕಿಳಿಸಲಿದೆ.
ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 5ರಿಂದ ಮ್ಯಾಂಚೆಸ್ಟರ್ನಲ್ಲಿ ಶುರುವಾಗಲಿದೆ. ಈ ಟೆಸ್ಟ್ ಸರಣಿ ಕೂಡ ಜೈವಿಕ ಸುರಕ್ಷತೆಯೊಂದಿಗೆ ನಡೆಯಲಿದೆ. ಈಗಾಗಲೇ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಟೆಸ್ಟ್ ಪಂದ್ಯಗಳು ಜೈವಿಕ ಸುರಕ್ಷತೆಯೊಂದಿಗೆ ನಡೆದಿದೆ. ಈ ಸರಣಿಯನ್ನು ಇಂಗ್ಲೆಂಡ್ 2-1ರಿಂದ ಗೆದ್ದುಕೊಂಡಿತ್ತು.
ಇಂಗ್ಲೆಂಡ್ ತಂಡದ 14 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧ ಆಡಿದ್ದ ತಂಡವನ್ನೇ ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಇಸಿಬಿ ತಿಳಿಸಿದೆ. ಅಂದ ಹಾಗೇ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 5ರಿಂದ, ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 13ರಿಂದ ಹಾಗೂ ಮೂರನೇ ಟೆಸ್ಟ್ ಪಂದ್ಯ ಆಗಸ್ಟ್ 21ರಿಂದ ಆರಂಭವಾಗಲಿದೆ.
ಇಂಗ್ಲೆಂಡ್ ಟೆಸ್ಟ್ ತಂಡ – ಜಾಯ್ ರೂಟ್ (ನಾಯಕ), ಬೆನ್ ಸ್ಟೋಕ್ಸ್, ರೋರಿ ಬನ್ರ್ಸ್, ಜೋಸ್ ಬಟ್ಲರ್, ಝಾಕ್ ಕ್ರಾವ್ಲೇ, ಒಲಿವ್ ಪೊಪ್, ಡಾಮಿನಿಕ್ ಸಿಬ್ಲೇಯ್, ಜೇಮ್ಸ್ ಆಂಡರ್ಸನ್, ಜೋಫ್ರಾ ಆರ್ಚರ್, ಡಾಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್, ಸ್ಯಾಮ್ ಕುರನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.