ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಜಸ್ಪ್ರೀತ್ ಬುಮ್ರಾ (Jasprit Bumrah) 6 ವಿಕೆಟ್ ಕಬಳಿಸುವುದರ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಬುಮ್ರಾ 45 ರನ್ ನೀಡಿ 6 ವಿಕೆಟ್ ಕಿತ್ತು ಇಂಗ್ಲೆಂಡ್ ತಂಡಕ್ಕೆ ಶಾಕ್ ನೀಡಿದ್ದಾರೆ. ಇಂಗ್ಲೆಂಡ್ ನ ನಾಯಕ ಬೆನ್ ಸ್ಟೋಕ್ಸ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವುದರೊಂದಿಗೆ ಟೆಸ್ಟ್‌ನಲ್ಲಿ ಅತಿ ವೇಗವಾಗಿ 150 ವಿಕೆಟ್ ಪಡೆದ ಏಷ್ಯಾದ ಎರಡನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಅಲ್ಲದೇ, ಬುಮ್ರಾ ಅವರು ಕಪಿಲ್ ದೇವ್ ಅವರ 41 ವರ್ಷಗಳ ಹಿಂದಿನ ದಾಖಲೆ ಸರಿಗಟ್ಟಿದ್ದಾರೆ. 1983ರಲ್ಲಿ ಅಹಮದಾಬಾದ್‍ನಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಪಿಲ್ ದೇವ್ ಅವರು ಈ ಸಾಧನೆ ಮಾಡಿದ್ದರು. ಈಗ ಬುಮ್ರಾ ಈ ದಾಖಲೆ ಮಾಡಿದ್ದಾರೆ. ಕಪಿಲ್ ಆ ಪಂದ್ಯದಲ್ಲಿ 83 ರನ್ ನೀಡಿ 9 ವಿಕೆಟ್ ಉರುಳಿಸಿದ್ದರು. ಬುಮ್ರಾ ಅವರು ಜೋ ರೂಟ್ ವಿಕೆಟ್ ಉರುಳಿಸುವ ಮೂಲಕ ಟೆಸ್ಟ್‌ನಲ್ಲಿ ರೂಟ್ ಅವರನ್ನು 8ನೇ ಬಾರಿ ಔಟ್ ಮಾಡಿದ ದಾಖಲೆ ಬರೆದಿದ್ದಾರೆ.