ಎರಡನೇ ಟೆಸ್ಟ್ ಪಂದ್ಯಕ್ಕೆ ಜೋಫ್ರಾ ಆರ್ಚೆರ್ ಅಲಭ್ಯ..!
ಟೀಮ್ ಇಂಡಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಆತ್ಮ ವಿಶ್ವಾಸದಲ್ಲಿರುವ ಇಂಗ್ಲೆಂಡ್ ತಂಡಕ್ಕೆ ಇದೀಗ ಆಘಾತವಾಗಿದೆ.
ಇಂಗ್ಲೆಂಡ್ ತಂಡದ ಟ್ರಂಪ್ ಕಾರ್ಡ್ ಬೌಲರ್ ವೇಗಿ ಜೋಫ್ರಾ ಆರ್ಚೆರ್ ಅವರು ಎಲ್ಪೋ ನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ಜೋಫ್ರಾ ಆರ್ಚೆರ್ ಅವರು ಕೇವಲ 9 ಓವರ್ ಗಳನ್ನು ಎಸೆದಿದ್ದರು. ಆದ್ರೆ ಆರ್ಚೆರ್ ಅವರ ನೋವು ಗಂಭೀರವಾಗಿ ಏನು ಇಲ್ಲ. ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಾರೆ. ಮೂರನೇ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಸ್ಪಷ್ಟಪಡಿಸಿದೆ.
ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 13ರಿಂದ ಚೆನ್ನೈನಲ್ಲಿ ಆರಂಭವಾಗಲಿದೆ. ಈಗಾಗಲೇ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0ಯಿಂದ ಮುನ್ನಡೆ ಪಡೆದುಕೊಂಡಿದೆ. ಹಿನ್ನಡೆಯಲ್ಲಿರುವ ಟೀಮ್ ಇಂಡಿಯಾ ಸೇಡು ತೀರಿಸಿಕೊಂಡು ಅಂತರವನ್ನು ಸಮಗೊಳಿಸುವತ್ತ ಟೀಮ್ ಇಂಡಿಯಾ ಚಿತ್ತವನ್ನಿಟ್ಟಿದೆ. ಹಾಗೇ ಟೀಮ್ ಇಂಡಿಯಾದಲ್ಲಿ ಕೆಲವೊಂದು ಬದಲಾವಣೆಯಾಗೋದು ಕೂಡ ಖಚಿತವಾಗಿದೆ. ಆದ್ರೆ ಇಂಗ್ಲೆಂಡ್ ತಂಡದಲ್ಲಿ ಜೋಫ್ರಾ ಆರ್ಚೆರ್ ಅವರ ಜಾಗಕ್ಕೆ ಯಾರು ಆಯ್ಕೆಯಾಗುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.