ಶಿವಮೊಗ್ಗ: ಖದೀಮನೊಬ್ಬ ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಪರಾರಿಯಾಗಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದೆ. ಖದೀಮನು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಯಕರ್ತೆ ಶ್ರೀಮತಿ ಎಂಬುವವರನ್ನು ಹೆದರಿಸಿ, ಕೊರಳಲ್ಲಿದ್ದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.
ಮಹಿಳೆ ಧರಿಸಿದ್ದ 42 ಗ್ರಾಂ ತೂಕದ ಸುಮಾರು 3 ಲಕ್ಷದ 20 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರ ಎಗರಿಸಿದ್ದಾನೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಹೊಸನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.