Degree Entrance Exam: ಪದವಿಗು ಬಂತು ಪ್ರವೇಶ ಪರೀಕ್ಷೆ

1 min read
Degree Exam Saaksha Tv

ಪದವಿಗು ಬಂತು ಪ್ರವೇಶ ಪರೀಕ್ಷೆ

ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಕೆಲವು ವರ್ಷಗಳಿಂದ ಮಹತ್ತರ ಬದಲಾವಣೆಗಳು ಆಗುತ್ತಿದ್ದು, ಇನ್ಮುಂದೆ ಪದವಿ ಪ್ರವೇಶಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಕೇಂದ್ರಿಯ ವಿಶ್ವವಿದ್ಯಾಲಯಗಳಿಗೆ ಕಡ್ಡಾಯವಾಗಿರುವ ಪ್ರವೇಶ ಪರೀಕ್ಷೆಗೆ ರಾಜ್ಯದ ಸರ್ಕಾರಿ ವಿವಿಗಳು ಒಪ್ಪಿಗೆ ಸೂಚಿಸಿವೆ. ಒಂದು ವೇಳೆ ಈ ವ್ಯವಸ್ಥೆ ಜಾರಿಯಾದರೂ ವಿದ್ಯಾರ್ಥಿಗಳು ಪದವಿಗೆ ದಾಖಲಾತಿ ಪಡೆಯಲು ಪ್ರವೇಶ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ.

ಸದ್ಯ ಕೇಂದ್ರ ಸರ್ಕಾರ ಬಿಎ, ಬಿಕಾಂ, ಬಿಎಸ್ಸಿ ಅಂತಹ ತಾಂತ್ರಿಕೇತರ ಶಿಕ್ಷಣಕ್ಕೆ ರಾಷ್ಟ್ರಮಟ್ಟದ ಪ್ರವೇಶ ಪರೀಕ್ಷೆ ನಡೆಸುತ್ತಿದೆ. ಈ ವ್ಯವಸ್ಥೆಯನ್ನು ರಾಜ್ಯ ಸರ್ಕಾರಿ ಅಧೀನದ ಖಾಸಗಿ ಮತ್ತು ಡೀಮ್ಡ್ ವಿವಿಗಳಿಗೆ ವಿಸ್ತರಿಸಲು ವಿಶ್ವವಿದ್ಯಾಲಯದ ಧನ ಸಹಾಯ ಆಯೋಗ (ಯುಜಿಸಿ) ಮುಂದಾಗಿದ್ದು, ಈ ಸಂಬಂಧ ಕಾರ್ಯತತ್ಪರವಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd