ಇನ್ಮುಂದೆ ವಾರಾಂತ್ಯದಲ್ಲಿ ನಂದಿ ಬೆಟ್ಟ ಪ್ರವೇಶಕ್ಕೆ ನಿಷೇಧ Nandi Hills
ಚಿಕ್ಕಬಳ್ಳಾಪುರ : ಇನ್ಮುಂದೆ ವಾರಾಂತ್ಯದಲ್ಲಿ ನಂದಿ ಬೆಟ್ಟ ಪ್ರವೇಶಕ್ಕೆ ಸಾರ್ವಜನಿಕರ ಪ್ರವೇಶ ನಿಬರ್ಂಧಿಸಲಾಗಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮವನ್ನ ಮತ್ತೆ ಲಾಕ್ ಡೌನ್ ಮಾಡಿರುವುದಾಗಿ ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಅನ್ ಲಾಕ್ 3.0 ಬಳಿಕ ವೀಕೆಂಡ್ ನಲ್ಲಿ ಸಾವಿರಾರು ಮಂದಿ ನಂದಿಗಿರಿಧಾಮಕ್ಕೆ ಆಗಮಿಸಿದ್ದರು. ಈ ವೇಳೆ ಕೊರೊನಾ ನಿಯಮಗಳ ಪಾಲನೆ ಮಾಡದೇ ಬಹುತೇಕ ಪ್ರವಾಸಿಗರು ನಿರ್ಲಕ್ಷ್ಯ ವಹಿಸಿದ್ದರು. ಇದನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಆರೋಗ್ಯ ಸಚಿವ ಸುಧಾಕರ್ ಜೊತೆ ಚರ್ಚಿಸಿ, ನಂದಿಗಿರಿಧಾಮದಲ್ಲಿ ಜನಸಂದಣಿ ತಡೆಯುವುದು ಅತ್ಯವಶ್ಯಕವಾಗಿದೆ ಎಂದು ಮನಗಂಡು, ವೀಕೆಂಡ್ ಶನಿವಾರ-ಭಾನುವಾರ ಕಂಪ್ಲೀಟ್ ಆಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಏರಿದ್ದಾರೆ.
ಮುಂದಿನ ಆದೇಶದವರೆಗೂ ಈ ಆದೇಶ ಜಾರಿಯಲ್ಲಿರಲಿದೆ. ಶುಕ್ರವಾರ ಸಂಜೆ 6 ಗಂಟೆಗೆ ನಂದಿಬೆಟ್ಟದ ಬಾಗಿಲು ಬಂದ್ ಆಗಲಿದ್ದು, ಮರಳಿ ಸೋಮವಾರ ಎಂದಿನಂತೆ 6 ಗಂಟೆಗೆ ತೆರೆಯಲಿದೆ.