eshwarappa
ಶಿರಾ ಮತ್ತು ಆರ್ಆರ್ ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮಾತ್ರವಲ್ಲ,
ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಪೂರ್ಣ ಬಹುಮತ ಪಡೆಯಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೀದರ್ ನಲ್ಲಿ ಮಾತನಾಡಿರುವ ಅವರು ಹಿಂದೆ ಬಿಜೆಪಿ ಪಕ್ಷದಿಂದ ಟಿಕೆಟ್ ಕೇಳಲು ಬರುತ್ತಿರಲಿಲ್ಲ.
ಆದರೆ, ಈಗ ಬಿಜೆಪಿಯೇ ಗೆಲ್ಲುವ ಕುದರೆ ಅಂತ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ.

ಅಪೇಕ್ಷಿತರ ಎಲ್ಲರನ್ನು ಒಗ್ಗಟ್ಟಾಗಿ ತೆಗೆದುಕೊಂಡು ಎರಡು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ.
ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ ಎಂದು ಹೇಳಿದರು.
ಅಲ್ಲದೇ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷ ಅಳಿಸಿ ಹೋಗಿದೆ ಎಂದು ನಾವು ಎಲ್ಲಿಯೂ ಹೇಳಿಲ್ಲ.
ಆದರೆ, ಇದ್ದರೆ ತಾನೇ ಅಳಿಸಿ ಹೋಗುತ್ತದೆ. ಭೂತ ಕನ್ನಡಿ ಹಾಕಿ ಪಕ್ಷವನ್ನು ಹುಡುಕಬೇಕಾದ ಸ್ಥಿತಿ ಇದೆ.
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ಬೆಳೆಯಬೇಕೆಂಬುದು ನಮ್ಮ ಅಪೇಕ್ಷೆ. ಆದರೆ, ಎರಡು ಪಕ್ಷಗಳು ಪರಸ್ಪರ ಬಡಿದಾಡುಕೊಳ್ಳುತ್ತಿವೆ ಎಂದು ವ್ಯಂಗ್ಯವಾಡಿದರು.
eshwarappa








