ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ಕೊಡಲ್ಲ : ಈಶ್ವರಪ್ಪ
ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ತಯಾರಿ ಆರಂಭವಾಗಿದ್ದು, ಕಾಂಗ್ರೆಸ್ – ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ನಿರತವಾಗಿವೆ. ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ “ನಾವು ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕುರುಬ ಸಮಾಜ, ಲಿಂಗಾಯತ ಸಮಾಜ, ಒಕ್ಕಲಿಗ ಸಮಾಜ, ಬ್ರಾಹ್ಮಣ ಸಮಾಜ ಅಂತಾ ಪ್ರಶ್ನೆ ಇಲ್ಲ.
ಎಲ್ಲ ಒಟ್ಟಿಗೆ ಕುಳಿತು ರಾಷ್ಟ್ರದ ನಾಯಕರ ಜೊತೆ ಚರ್ಚೆ ಮಾಡ್ತೀವಿ. ಯಾರು ಜನರ ಮಧ್ಯೆ ಗೆಲ್ತಾರೆ ಅಂತವರನ್ನ ಹುಡುಕಿ ಗೆಲ್ಲಿಸ್ತೀವಿ. ನಮ್ಮ ಹಣೆಬರಹ ಕೆಟ್ಟಿದೆ.. ಅದಕ್ಕೆ ಇನ್ನೂ ಮಂತ್ರಿಯಾಗಿಲ್ಲ : ಎಂಟಿಬಿ
ಬೆಳಗಾವಿ ಲೋಕಸಭಾ ಟಿಕೆಟ್ ಕುರುಬರಿಗೆ ಕೊಡ್ತಿವೋ, ಲಿಂಗಾಯತರಿಗೆ ಕೊಡ್ತಿವೋ, ಒಕ್ಕಲಿಗರಿಗೆ ಕೊಡ್ತಿವೋ, ಬ್ರಾಹ್ಮಣರಿಗೆ ಕೊಡ್ತಿವೋ ಗೊತ್ತಿಲ್ಲ. ಆದ್ರೆ, ಮುಸಲ್ಮಾನರಿಗಂತೂ ಟಿಕೆಟ್ ಕೊಡಲ್ಲ ಎಂದು ಈಶ್ವರಪ್ಪ ಹೇಳಿದರು.
ಇನ್ನು ಬೆಳಗಾವಿ ಹಿಂದೂತ್ವದ ಕೇಂದ್ರ, ಇಲ್ಲಿ ಯಾವುದೇ ಕಾರಣಕ್ಕೂ ಮುಸ್ಲಿಮರಿಗೆ ಟಿಕೆಟ್ ಕೊಡುವ ಪ್ರಶ್ನೆ ಬರಲ್ಲ. ಬೆಳಗಾವಿ ಲೋಕಸಭಾ ಟಿಕೆಟ್ ಹಿಂದೂತ್ವವಾದಿಗಳಿಗೆ ಕೊಡ್ತೀವಿ. ಸಂತೋಷ್ ಆತ್ಮಹತ್ಯೆ ಯತ್ನಕ್ಕೆ `ಆ ವಿಡಿಯೋ’ ಕಾರಣ..? ಬಾಂಬ್ ಸಿಡಿಸಿದ ಡಿಕೆಶಿ..!
ರಾಯಣ್ಣ ಶಿಷ್ಯಂದರಿಗೆ ಕೊಡ್ತೀವೋ, ಚೆನ್ನಮ್ಮ ಶಿಷ್ಯಂದರಿಗೆ ಕೊಡ್ತೀವೋ, ಶಂಕರಾಚಾರ್ಯ ಶಿಷ್ಯಂದರಿಗೆ ಕೊಡ್ತಿವೋ ನನಗೆ ಗೊತ್ತಿಲ್ಲ. ಜನರ ಮಧ್ಯ ನಿಂತು ಗೆದ್ದು ಬರುವ ಹಿಂದುತ್ವದ ವ್ಯಕ್ತಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗುವುದು ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಈಶ್ವರಪ್ಪ, ಸಿದ್ದರಾಮಯ್ಯ ವರ್ಚಸ್ಸು ಎಲ್ಲಿದೆ, ಆರ್‍ಆರ್‍ನಗರ-ಶಿರಾ ಕ್ಷೇತ್ರಗಳಲ್ಲಿ ಏನಾಯ್ತು. ಕಾಂಗ್ರೆಸ್ ಇಲ್ಲ ಪಾಪ ಸಿದ್ದರಾಮಯ್ಯ ಎಲ್ಲಿ. ಈಗಲೂ ಸಿಎಂ ಮುಂದೆಯೂ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿದ್ದಾರೆ.
ಬಾದಾಮಿಯಲ್ಲಿ ಹೆಚ್ಚು ಕಡಿಮೆ ಆಗಿದ್ರೆ ರಾಜಕಾರಣದಲ್ಲಿಯೇ ಸಿದ್ದರಾಮಯ್ಯ ಇರ್ತಿರಲಿಲ್ಲ. ರಾಜಕೀಯವಾಗಿ ನಾವು ಬದುಕಿದ್ದೀವಿ ಅಂತಾ ತೋರಿಸೋಕೆ ಏನೇನೋ ಹೇಳಿಕೆ ಕೊಡ್ತಿದಾರೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel