ಕಲಬುರಗಿ: ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಈ ಘಟನೆ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿನಿಯ ದೊಡ್ಡಪ್ಪನ ಮಗನಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಣ್ಣನನ್ನು ಕೂಡ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ವಿದ್ಯಾರ್ಥಿನಿ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ರಜೆ ಇದ್ದಾಗ ಮನೆಗೆ ಬರುತ್ತಿದ್ದಳು. ಹೀಗೆ ಬಂದಾಗ ಸಹೋದರರೇ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ರಾತ್ರಿ ಹೊತ್ತು ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆತ ತಂಗಿ ಎನ್ನುವುದನ್ನೂ ನೋಡದೇ ರೇಪ್ ಮಾಡುತ್ತಿದ್ದ. ಹೀಗೆ ಆತ ಹಲವು ಬಾರಿ ರೇಪ್ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೇ ಈ ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಡಿ. 24 ರಂದು ಶಾಲೆಯಲ್ಲಿ ಇದ್ದಾಗ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆನಂತರ ಅವಳು ಮನೆಗೆ ಬಂದಿದ್ದಾಳೆ. ನಂತರ ಸಂಬಂಧಿಕರು ವಿದ್ಯಾರ್ಥಿನಿ ಕುಟಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆಕೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಅಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕುಟುಂಬಸ್ಥರಿಗೆ ದಿಕ್ಕೇ ತೋಚದಂತಾಗಿದೆ.
ಕೂಡಲೇ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿ, ಆರೋಪಿ ಬಂಧಿಸಲಾಗಿದೆ.